ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.
ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಒಂದು ವೇಳೆ ಸಚಿವ ಸಂಪುಟ ವಿಸ್ತರಣೆಯಾದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪಂಗನಾಮ. ಇಷ್ಟು ದಿನ ಅವರು ಮಾಡಿದ ಟೆಂಪಲ್ ರನ್ ವೇಸ್ಟ್ ಆಗುತ್ತದೆ ಎಂದು ಕಾಲೆಳೆದಿದಾರೆ.
ಸಂಪುಟ ಪುನಾರಚನೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಅನುಕೂಲವಾಗಲ್ಲ. ಇದಿರಿಂದ ಅವರಿಗೆ ಪಂಗನಾಮ ಹಾಕಿದಂತಾಗುತ್ತದೆ ಎಂದು ಲೇವಡಿ ಮಾಡಿದರು.
