ಮಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಪಿತೂರಿ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದು, ಬಿಜೆಪಿ ಸಮಾವೇಶ ನಡೆಸುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ನೀಡು ಬಿಟ್ಟಿರುವ ಬಿಜೆಪಿ ನಾಯಕರು, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಚರ್ಚಿಸಿದರು. ಇದೇ ವೇಳೆ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರು ಸಮಾವೇಶ ಆಯೋಜಿಸಿದ್ದಾರೆ.
ಬಿಜೆಪಿ ಸಮಾವೇಶದಲ್ಲಿ ವೇದಿಕೆ ಮೇಲೆ ಭಾಷಣ ಆರಂಭ ಮಾಡುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್.ಅಶೋಕ್ ಎಡವಟ್ಟು ಮಾಡಿಕೊಂಡಿದ್ದಾರೆ. ವೇದಿಕೆ ಮೇಲೆ ಉಪಸ್ಥಿತರಿರುವಂತಹ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಪ್ರಹ್ಲಾದ್ ಜೋಶಿಯವರೇ ಎಂದಿದ್ದಾರೆ. ತಕ್ಷಣ ಎಚ್ಚೆತ್ತು ಕ್ಷಮಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಎಂದು ತಿದ್ದಿಕೊಂಡು ಭಾಷಣ ಮುಂದುವರೆಸಿದ ಪ್ರಸಂಗ ನಡೆದಿದೆ.
ಭಾಷಣದ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ನಿಮಗೆ ಧಮ್ ಇದ್ದರೆ ಧರ್ಮಸ್ಥಳಕ್ಕೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದರು.