R. ಅಶೋಕ್, H.D ಕುಮಾರಸ್ವಾಮಿಗೆ ಧಮ್ ಇದ್ರೆ ಈ ಪ್ರಶ್ನೆಗಳಿಗೆ ಉತ್ತರಿಸಿ : ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್

ಬೆಂಗಳೂರು : ಆರ್. ಅಶೋಕ್, ಹೆಚ್.ಡಿ. ಕುಮಾರಸ್ವಾಮಿಗೆ ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ವಿಪಕ್ಷಗಳಿಗೆ ಕಾಂಗ್ರೆಸ್ ಕೌಂಟರ್ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್. ಅಶೋಕ್, ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ? ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ. ಮನುವಾದಕ್ಕೋ ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? ಎಂದು ಕಾಂಗ್ರೆಸ್ ಕೌಂಟರ್ ನೀಡಿದೆ.

https://twitter.com/INCKarnataka/status/1751849902903374119?ref_src=twsrc%5Etfw%7Ctwcamp%5Etweetembed%7Ctwterm%5E1751849902903374119%7Ctwgr%5Edd6fa75fb034c23245c61c9fbdd66da3ce4454d5%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fr-ashok-and-h-d-kumaraswamy-answer-these-questions-congress-throw-some-questions-to-the-opposition-on-mandya-hanuman-dhwaja-case-ayb-770855.html

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read