BIG NEWS: ಸತ್ಯ ಹೇಳಿದ್ದಕ್ಕೆ ರಾಜಣ್ಣ ಅವರ ತಲೆದಂಡವಾಗಿದೆ: ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ

ಬೆಂಗಳೂರು: ಸತ್ಯ ಹೇಳಿದ್ದಕ್ಕೆ ಕೆ.ಎನ್.ರಾಜಣ್ಣ ಅವರ ತಲೆದಂಡವಾಗಿದೆ. ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕೆ.ಎನ್.ರಾಜಣ್ಣ ರಾಜೀನಾಮೆ ವಿಚಾರವಾಗಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸತ್ಯ ಹೇಳಿದರೆ ಕಾಂಗ್ರೆಸ್ ನವರಿಗೆ ಆಗಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ರಾಜಣ್ಣ ತಲೆದಂಡವಾಗಿದೆ. ಸೆಪ್ಟೆಂಬರ್ ನಲ್ಲಿ ಪ್ರಳಯ ಆಗುತ್ತೆ ಎಂದು ರಾಜಣ್ಣ ಹೇಳಿದ್ದರು. ಮತಗಳ್ಳತನ ಆರೋಪದ ವಿಚಾರವಾಗಿ ಸತ್ಯ ಹೇಳಿದ್ದರು. ಇದರ ಬೆನ್ನಲ್ಲೇ ರಾಜಣ್ಣ ಅವರ ರಾಜೀನಾಮೆ ಪಡೆಯಲಾಗಿದೆ.

ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ನವರಿಗೆ ಹೊಟ್ಟೆಗೆ ಮೆಣಸಿನ ಕಾಯಿ ಹಾಕಿದಂತೆ ಉರಿ ಶುರುವಾಗಿದೆ. ಮೊನ್ನೆನೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಜೀನಾಮೆ ಪಡೆಯಲು ಸೂಚಿಸಿದ್ದಾರೆ ಎಂದು ಗೊತ್ತಾಗಿತ್ತು. ಈಗ ಸಚಿವರ ರಾಜೀನಾಮೆ ಪಡೆದಿದ್ದಾರೆ ಈ ಮೂಲಕ ವಾಲ್ಮೀಕಿ ಸಮಾಜದವರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read