ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ ಎಂದು ಪುನರುಚ್ಛರಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ನಂಬೆರ್ ಅಥವಾ ಡಿಸೆಂಬರ್ ನಲ್ಲಿ ಕ್ರಾಂತಿಯಾಗುವುದು ನಿಶ್ಚಿತ ಎಂದಿದ್ದಾರೆ.
ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಾತನಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ನವೆಂಬರ್ ನಲ್ಲಿ ಕ್ರಾಂತಿಯಾಗುವುದು ನಿಶ್ಚಿತ ಎಂದರು. ರಾಜ್ಯದಲ್ಲಿ ಕ್ರಾಂತಿಯಾಗಲಿದೆ ಎಂದಿದ್ದ ಸಚಿವ ಕೆ.ಎನ್.ರಾಜಣ್ಣ ಈಗ ಮನೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿಯೂಒಪ್ಪಂದ ಆಗಿರುವುದು ನಿಜ. ಅಧಿಕಾರಕ್ಕಾಗಿ ಈಗ ಜಗಳವೂ ಆರಂಭವಾಗಿದೆ. ಸಿದ್ದರಾಮಯ್ಯ ಅಧಿಕಾರ ಬಿಡುವುವ ಜಾಯಮಾನದವರಲ್ಲ. ಇನ್ನು ಡಿ.ಕೆ.ಶಿವಕುಮಾರ್ ಹಠ ಬಿಡುವುದಿಲ್ಲ ಎಂದರು.
ನಾವಂತೂ ಮೈತ್ರಿ ಸರ್ಕಾರ ರಚಿಸಲ್ಲ, ಆಪರೇಷನ್ ಕಮಲ ಮಾಡುವ ವಿಚಾರವೂ ಇಲ್ಲ. ಆದರೆ ಚುನಾವಣೆಗೆ ಹೋಗಲು ಸಿದ್ಧರಿದ್ದೇವೆ ಎಂದರು.