HomeKarnatakaBIG NEWS: ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಮಾಜಿ ಕಾರ್ಪೊರೇಟರ್ ಪದ್ಮರಾಜ್

BIG NEWS: ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಮಾಜಿ ಕಾರ್ಪೊರೇಟರ್ ಪದ್ಮರಾಜ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ನಾನು ಬಿಜೆಪಿಯಲ್ಲಿದ್ದಾಗ ಆರ್.ಅಶೋಕ್ ಗೆ 1 ಕೋಟಿ ರೂಪಾಯಿ ಹಣ ನೀಡಿದ್ದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಕಾರ್ಪೊರೇಟರ್ ಪದ್ಮರಾಜ್, 2010ರಲ್ಲಿ ಆರ್.ಅಶೋಕ್ ಗೆ ನಾನು 1 ಕೋಟಿ ಹಣ ನೀಡಿದ್ದೆ. ನನ್ನನ್ನು ಮೇಯರ್ ಮಾಡ್ತೀನಿ ಎಂದು ಹಣ ಇಸ್ಕೊಂಡಿದ್ದರು. ಆದರೆ ಮಾಡಲಿಲ್ಲ, ಹಣವನ್ನೂ ಕೊಟ್ಟಿರಲಿಲ್ಲ ಎಂದು ಆರೋಪಿಸಿದ್ದಾರೆ. ಆ ಬಳಿಕ ನಾನು ಕಾಂಗ್ರೆಸ್ ಗೆ ಬಂದ ಮೇಲೆ ಹಣ ವಸೂಲಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದೇ ಸೇಡಿನಿಂದಾಗಿ ಈಗ ನನ್ನ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕಾರ್ಪೊರೇಟರ್ ಪದ್ಮರಾಜ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ಪದ್ಮರಾಜ್ ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪದ್ಮರಾಜ್ ಬಿಜೆಪಿ ನಾಯಕರ ವಿರುದ್ಧ ಹಲವು ಆರೋಪ ಮಾಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular