BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಂದ ಮೊಬೈಲ್‌ ಬಳಕೆ ಪ್ರಕರಣ: NIA ತನಿಖೆಗೆ ಆರ್‌.ಅಶೋಕ್ ಆಗ್ರಹ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಬ್ಬ ಭಯೋತ್ಪಾದಕ ಮೊಬೈಲ್‌ ಬಳಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಡಾಕ್ಟರ್‌ಗಳು ಸೇರಿದಂತೆ ಹೆಚ್ಚು ಶಿಕ್ಷಣ ಪಡೆದ ಮುಸ್ಲಿಮರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಈ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕಿದೆ. ಅಧಿಕಾರಕ್ಕೆ ಬರಲು ಓಲೈಕೆ ಮಾಡುವುದರಿಂದ ಹೀಗೆಲ್ಲ ಆಗುತ್ತಿದೆ. ಪರಪ್ಪನ ಅಗ್ರಹಾರದಲ್ಲೂ ಕಾಂಗ್ರೆಸ್‌ನ ತಪ್ಪಿನಿಂದಲೇ ಉಗ್ರವಾದಿಗಳು ಮೊಬೈಲ್‌ ಬಳಸುವಂತಾಗಿದೆ. ಇಂತಹ ವಿಫಲತೆಯನ್ನು ಒಪ್ಪಿಕೊಂಡು ಕಾಂಗ್ರೆಸ್‌ ನಾಯಕರು ರಾಜೀನಾಮೆ ನೀಡಬೇಕು ಎಂದರು.

ಇದು ಮನಮೋಹನ್‌ ಸಿಂಗ್‌ ಸರ್ಕಾರವಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಭಯೋತ್ಪಾದಕರಿಗೆ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಈ ಘಟನೆಯ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮ ವಹಿಸಲಿದೆ. ಕಾಂಗ್ರೆಸ್‌ ಇದ್ದಾಗ ನಕ್ಸಲ್‌ ಚಟುವಟಿಕೆ ಅಧಿಕವಾಗಿತ್ತು. ಅದನ್ನು ಗೃಹ ಸಚಿವ ಅಮಿತ್‌ ಶಾ ಬಹುತೇಕ ನಿರ್ಮೂಲನೆ ಮಾಡಿದ್ದಾರೆ. ಅದೇ ರೀತಿ ಭಯೋತ್ಪಾದನೆ ಕೂಡ ನಿರ್ಮೂಲನೆಯಾಗಲಿದೆ ಎಂದರು.

ರಾಜ್ಯ ಸರ್ಕಾರ ಕೇವಲ ಸುತ್ತೋಲೆ ಹೊರಡಿಸಿದರೆ ಸಾಲದು. ಗೃಹಸಚಿವರು ಹಾಗೂ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಜನರಲ್ಲಿ ವಿಶ್ವಾಸ ತುಂಬಬೇಕು. ಸಾಧ್ಯವಾದಷ್ಟು ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ ಮೇಲೆ ಜನರಿಗೆ ನಂಬಿಕೆ ಇಲ್ಲ. ಪಾಕಿಸ್ತಾನವನ್ನು ಕಾಂಗ್ರೆಸ್‌ ಪ್ರೀತಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read