HomeKarnatakaBIG NEWS: ಬರ ಪರಿಹಾರಕ್ಕೆ ಕೇವಲ 2 ಸಾವಿರ ರೂಪಾಯಿ: ಇದು ಆನೆ ಹೊಟ್ಟೆಗೆ ಅರೆಕಾಸಿನ...

BIG NEWS: ಬರ ಪರಿಹಾರಕ್ಕೆ ಕೇವಲ 2 ಸಾವಿರ ರೂಪಾಯಿ: ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಿದೆ; ಸರ್ಕಾರ ದಿವಳಿಯಾಗಿದೆ ಎಂದು ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಉಚಿತ ಯೋಜನೆಗಳನ್ನು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಈಗ ಹಣ ನೀಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್.ಅಶೋಕ್, ಯಾವ ಗ್ಯಾರಂಟಿಗಳನ್ನು ಸರಿಯಾಗಿ ಈಡೇರಿಸಿಲ್ಲ. ಈ ಸರ್ಕಾರ ಆರ್ಥಿಕವಾಗಿ ನೂರಕ್ಕೆ ನೂರರಷ್ಟು ಸಂಪೂರ್ಣ ದಿವಾಳಿಯಾಗಿದೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗೆಟ್ಟಿದ್ದಾರೆ. ಬರ ಪರಿಹಾರ 2 ಸಾವಿರ ಕೊಡ್ತಿವೀ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಇದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬ ಗಾದೆ ಮಾತಿನಂತಿದೆ. ರೈತರಿಗೆ ಬರ ಪರಿಹಾರ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲಾಗಿದೆ. ಮೊದಲು ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಲಿ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular