HomeKarnatakaBIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು?...

BIG NEWS: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಫೋಟೋ ತೆಗೆಯಲು ಮೊಬೈಲ್ ಎಲ್ಲಿಂದ ಬಂತು? ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ. ಫೋಟೋಗಳು ವೈರಲ್ ಆಗಿವೆ. ಜೈಲಿನಲ್ಲಿ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾನೆ. ಫೋಟೋ ತೆಗೆಯಲು ಜೈಲಿನಲ್ಲಿ ಮೊಬೈಲ್ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ. ಸಾಲು ಸಾಲು ಅಪರಾಧ ಪ್ರಕರನಗಳು ನಡೆಯುತ್ತಿದ್ದರೂ ಕೆಲ ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತದೆ? ಯಾವ ಖಾತೆ ಹೋಗುತ್ತದೆ ಎಂಬ ಭೀತಿಯಲ್ಲಿದ್ದಾರೆ. ಜೈಲಿನಲ್ಲಿ ನಡೆದ ಘಟನೆಗಳ ಬಗ್ಗೆ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular