HomeKarnatakaBIG NEWS: ಕೇಜ್ರಿವಾಲ್ ಹುಚ್ಚರಂತೆ ವರ್ತಿಸುತ್ತಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

BIG NEWS: ಕೇಜ್ರಿವಾಲ್ ಹುಚ್ಚರಂತೆ ವರ್ತಿಸುತ್ತಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಅರವಿಂದ ಕೇಜ್ರಿವಾಲ್ ಹುಚ್ಚರಂತೆ ಮಾತನಾಡುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದರು.

ಇಂಡಿಯಾ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದೇ ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಜ್ರಿವಾಲ್ ತಪ್ಪು ಮಾಡಿಲ್ಲ ಎಂದಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular