HomeKarnatakaಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ, ಗ್ಯಾರಂಟಿ ಘೋಷಿಸಿ ಜಾರಿ ಮಾಡಲಾಗದೇ ವಿಫಲವಾಗಿದೆ; ಆರ್.ಅಶೋಕ್ ವಾಗ್ದಾಳಿ

ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ, ಗ್ಯಾರಂಟಿ ಘೋಷಿಸಿ ಜಾರಿ ಮಾಡಲಾಗದೇ ವಿಫಲವಾಗಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಎಡಬಿದಂಗಿ ಸರ್ಕಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಮನಸ್ಸಿಗೆ ಬಂದಂತೆ ಗ್ಯಾರಂಟಿ ಯೋಜನೆ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲಾಗದೇ ವಿಫಲವಾಗಿದೆ ಎಂದರು.

ಕಾಂಗ್ರೆಸ್ ನ ಬೇಜವಾಬ್ದಾರಿಯಿಂದ ಕೆಆರ್ ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಡಲಾಗಿದೆ. ಇದರಿಂದ ಇಂದು ಬೆಂಗಳೂರಿಗೆ ಕುಡಿಯಲು ನೀರಿಲ್ಲದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟುದಿನವಾದರೂ ವಾರ್ಡ್ ಮಟ್ಟದಲ್ಲಿ ಒಂದು ಸಭೆ ನಡೆಸಿಲ್ಲ. ಕುಡಿಯುವ ನೀರನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯದ ಹಣಕಾಸಿನ ಸ್ಥಿತಿಯಂತು ಪಾತಾಳಕ್ಕೆ ಇಳಿದಿದೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular