HomeKarnatakaBIG NEWS: 9 ವರ್ಷ ಸುಮ್ಮನಿದ್ದು ಈಗ ಮಾತನಾಡ್ತಿದ್ದಾರೆ; ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು; ವಿಪಕ್ಷ ನಾಯಕ...

BIG NEWS: 9 ವರ್ಷ ಸುಮ್ಮನಿದ್ದು ಈಗ ಮಾತನಾಡ್ತಿದ್ದಾರೆ; ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ದೆಹಲಿಯಲ್ಲಿ ಫೆ.7ರಂದು ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ನಾಚಿಕೆಯಗಬೇಕು. ರಾಜ್ಯ ಸಭೆಯಲ್ಲಿ ವಿಪಕ್ಷ ನಾಯಕರು ಬಾಯಿ ಬಿಡಲಿಲ್ಲ. ಲೋಕಸಭೆಯಲ್ಲಿ ನಿಮ್ಮ ಸಂಸದರು ಮಾತನಾಡಿಲ್ಲ. 10 ಬಜೆಟ್ ಆಗಿದೆ. ಡಿ.ಕೆ.ಸುರೇಶ್ ಮಾತನಾಡಿದ್ರಾ? 9 ವರ್ಷಗಳ ಕಾಲ ಸುಮ್ಮನಿದ್ದು ಈಗ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದು ಕೇವಲ ಚುನಾವಣೆಗಾಗಿ ಮಾಡುತ್ತಿರುವ ಸ್ಟಂಟ್. ಸಿಎಂ ಸಿದ್ದರಾಮಯ್ಯ ಶ್ವೇತ ಪತ್ರ ಬಿಡುಗಡೆ ಮಾಡಲಿ. ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯವಾಗಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular