HomeKarnatakaರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಭಾಗ; ಬೆಂಬಲ ಬೆಲೆಯ ಗ್ಯಾರಂಟಿ ಎಂದು ಬುರುಡೆ ಬಿಟ್ಟಿದ್ದಾರೆ;...

ರೈತರ ಪ್ರತಿಭಟನೆ ಕಾಂಗ್ರೆಸ್‌ ಪೋಷಿತ, ಟೂಲ್‌ಕಿಟ್‌ನ ಭಾಗ; ಬೆಂಬಲ ಬೆಲೆಯ ಗ್ಯಾರಂಟಿ ಎಂದು ಬುರುಡೆ ಬಿಟ್ಟಿದ್ದಾರೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದು, ಇದು ಕಾಂಗ್ರೆಸ್‌ ಪೋಷಿತ, ಹಿಂದಿನಂತೆಯೇ ಟೂಲ್‌ಕಿಟ್‌ನ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಕೃಷಿ ಮಸೂದೆಗಳ ವಿಚಾರದಲ್ಲೂ ಕಾಂಗ್ರೆಸ್‌ ಇದೇ ಟೂಲ್‌ಕಿಟ್‌ ತಂತ್ರವನ್ನು ಅನುಸರಿಸಿತ್ತು. ಹಿಂದಿನ ಯುಪಿಎ ಸರ್ಕಾರಕ್ಕಿಂತ ಹೆಚ್ಚು ನೆರವನ್ನು ರೈತರಿಗೆ ಪ್ರಧಾನಿ ಮೋದಿ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಸ್ಥಗಿತಗೊಳಿಸಿದೆ. ರೈತ ವಿರೋಧಿಯಾಗಿರುವ ಕಾಂಗ್ರೆಸ್ ಈಗ ಪ್ರತಿಭಟನೆಯ ನಾಟಕವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿ ನೀಡುತ್ತೇವೆಂದು ಕಾಂಗ್ರೆಸ್ ಬುರುಡೆ ಬಿಟ್ಟಿದೆ. 2010 ರಲ್ಲಿ ತಮ್ಮದೇ ಯುಪಿಎ ಸರ್ಕಾರ ಇದ್ದಾಗ ಡಾ.ಎಂ.ಎಸ್.ಸ್ವಾಮಿನಾಥನ್ ಅವರು ಕನಿಷ್ಠ ಬೆಂಬಲ ಬೆಲೆ ಬಗ್ಗೆ ನೀಡಿದ್ದ ವರದಿಯನ್ನು ತಿರಸ್ಕಾರ ಮಾಡಿತ್ತು. ಈಗ ಲೋಕಸಭೆ ಚುನಾವಣೆಯಲ್ಲಿ ಸೋಲುವುದು ಗ್ಯಾರಂಟಿ ಎಂದು ಕಾಂಗ್ರೆಸ್ ನಿಶ್ಚಯ ಮಾಡಿಕೊಂಡಿದೆ. ಹೇಗಿದ್ದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್‌ ಗಾಂಧಿ ಮತ್ತಿತರ ಕಾಂಗ್ರೆಸ್‌ ನಾಯಕರು ಬೇಕಾಬಿಟ್ಟಿ ಹೇಳಿಕೆ ನೀಡುವ ಮೂಲಕ ರೈತರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರ ಆದಾಯ ಹೆಚ್ಚಿಸಲು, ಅನ್ನದಾತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿಸಲು ಯಾರಾದರೂ ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದರೆ ಅದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸರ್ಕಾರ ಮಾತ್ರ ಎಂದು ಹೇಳಿದರು.

2014-15 ರಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ರೈತರಿಗೆ ನೀಡುವ ಕನಿಷ್ಠ ಬೆಂಬಲ ಬೆಲೆಗೆ 1.06 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಆದರೆ 2022-23 ರಲ್ಲಿ ಪ್ರಧಾನಿ ಮೋದಿ ಅವರ ಸರ್ಕಾರ 2.28 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಈ ಮೂಲಕ ಬೆಂಬಲ ಬೆಲೆಯನ್ನು ದುಪ್ಪಟ್ಟು ಮಾಡಿದೆ ಎಂದು ಆರ್.ಅಶೋಕ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular