BIG NEWS: ಇದು ಗ್ರೇಟರ್‌ ಬೆಂಗಳೂರು ಅಲ್ಲ, ಕ್ವಾರ್ಟರ್‌ ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಬೆಂಗಳೂರಿನ ಒಂದು ಬಾಗಿಲನ್ನು ಮೂರು ಬಾಗಿಲನ್ನಾಗಿ ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ. ಇದರಿಂದಾಗಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬೆಂಗಳೂರನ್ನು ಗ್ರೇಟರ್‌ ಬೆಂಗಳೂರು ಮಾಡುತ್ತಿದ್ದಾರೆ. ಇದು ಗ್ರೇಟರ್ ಅಲ್ಲ, ಕ್ವಾರ್ಟರ್‌ ಬೆಂಗಳೂರು. ಇವರ ಈ ಕೆಲಸದಿಂದ ಅಭಿವೃದ್ಧಿಯಾಗಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್‌ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರ್ಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ. ಗ್ರೇಟರ್‌ ಬೆಂಗಳೂರಿಗೆ ವಿರುದ್ಧವಾಗಿ ಕಾನೂನು ಹೋರಾಟ ಮಾಡಲಿದ್ದೇವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಲಾಭಕ್ಕೆ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಲೇಔಟ್‌ಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್‌ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ನಗರದಲ್ಲಿ ಎಲ್ಲ ಕಡೆ ಕಸದ ರಾಶಿ ಇದೆ, ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ, ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆಯನ್ನು ಒಪ್ಪಿಕೊಳ್ಳದೆ ಇಂತಹ ಯೋಜನೆ ತಂದಿದ್ದಾರೆ ಎಂದು ಟೀಕಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read