HomeKarnatakaBIG NEWS: ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಲಿ; ಇಲ್ಲವಾದರೆ ಉಗ್ರ ಹೋರಾಟ; ಸರ್ಕಾರಕ್ಕೆ...

BIG NEWS: ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಲಿ; ಇಲ್ಲವಾದರೆ ಉಗ್ರ ಹೋರಾಟ; ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ನಾಯಕರಿಗೆ ನೆಹರು ಕಾಲದಿಂದಲೂ ರಾಮನ ಮೇಲೆ ದ್ವೇಷ ಇದೆ. ಆದರೀಗ ಹನುಮನ ಬಗ್ಗೆ ದ್ವೇಷ ಶುರುವಾಗಿದೆ. ಕೆರೆಗೋಡಿನಲ್ಲಿ 20-30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದೆ. ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ ರೂ. ಖರ್ಚು ಮಾಡಿ 108 ಅಡಿ ಸ್ತಂಭ ನಿರ್ಮಿಸಲಾಗಿದೆ. ಇಡೀ ವರ್ಷ ಅಲ್ಲಿ ಹನುಮ ಧ್ವಜ ಹಾರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಹನುಮನ ನಾಡಿನಲ್ಲಿ ಹನುಮ ಧ್ವಜ ಹಾರಿಸಲು ಸರ್ಕಾರ ಬಿಡುತ್ತಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರವೆಂದರೇನೆ ಶಕುನಿ ಸರ್ಕಾರ. ಹನುಮ ಧ್ವಜವನ್ನು ತೆಗೆಸಲು ಸರ್ಕಾರ ರಾಷ್ಟ್ರಧ್ವಜವನ್ನು ಬಳಕೆ ಮಾಡಿದೆ. ಮೊದಲು ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಬೇಕು ಎಂದು ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹೋರಾಟ ಇಡೀ ಮಂಡ್ಯ ಜಿಲ್ಲೆಯ ಮನೆಗಳನ್ನು ತಲುಪಲಿದೆ. ಇದು ಅಕ್ರಮವಾಗಿದ್ದರೆ ನೋಟಿಸ್ ಜಾರಿ ಮಾಡಬೇಕಿತ್ತು. ಅದು ನ್ಯಾಯಾಲಯದಲ್ಲಾದರೂ ತೀರ್ಮಾನ ಆಗಬೇಕಿತ್ತು. ಅದನ್ನು ಬಿಟ್ಟು ಲೋಕಸಭಾ ಚುನಾವಣಾ ಲಾಭಕ್ಕಾಗಿ ಹೀಗೆ ಮಾಡಲಾಗುತ್ತಿದೆ ಎಂದು ಹೇಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular