HomeKarnatakaBIG NEWS: ಇದು ರಾಷ್ಟ್ರದ ಭದ್ರತೆಯ ಪ್ರಶ್ನೆ; ರಾಜಕೀಯ ಮಾಡದೇ ಪ್ರಕರಣದ ಬಗ್ಗೆ ಸೂಕ್ತ ತನಿಖೆ...

BIG NEWS: ಇದು ರಾಷ್ಟ್ರದ ಭದ್ರತೆಯ ಪ್ರಶ್ನೆ; ರಾಜಕೀಯ ಮಾಡದೇ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಲಿ; ಆರ್.ಅಶೋಕ್ ಆಗ್ರಹ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಗ್ಗೆ ಸೂಕ್ತ ತನಿಖೆ ನಡೆಸಲಿ. ಇದರಲ್ಲಿ ನಾವು ಯಾವುದೇ ರಾಜಕೀಯ ಮಾಡದೆ ಬೆಂಬಲ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಮುಚ್ಚಿ ಹಾಕುತ್ತಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಸೂಕ್ತ ತನಿಖೆ ನಡೆಯಬೇಕು. ಇದು ರಾಷ್ಟ್ರದ ಭದ್ರತೆಯ ಪ್ರಶ್ನೆ ಎಂದು ಹೇಳಿದರು.

ಮತ್ತೊಂದೆಡೆ ಹಾವೇರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣ ಮುಚ್ಚಿ ಹಾಕಿದ್ದಾರೆ. ಹಾಗಾಗಿ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ರಾಮೇಶ್ವರಂ ಕೆಫೆ ಬಂಬ್ ಸ್ಫೋಟ್ ಪ್ರಕರಣ ರಾಷ್ಟ್ರದ ಭದ್ರತೆಯ ಪ್ರಶ್ನೆ. ಹಾಗಾಗಿ ಓಲೈಕೆ ರಾಜಕಾರಣ ಬಿಟ್ಟು ಸಮರ್ಪಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣವನ್ನು ಮುಚ್ಚುವ ಪ್ರಯತ್ನ ಯಾಕೆ? ಇದೇ ರೀತಿ ಉತ್ತರ ಬರಬೇಕು ಎಂದು ಒತ್ತಡ ಹಾಕುವುದು ಯಾಕೆ? ಇಂತಹ ಘಟನೆಗಳಿಂದ ಜನರು ಬೇಸತ್ತಿದ್ದಾರೆ ಎಂದು ಕಿಡಿಕಾರಿದರು.

 

For Latest News Updates, Join Our Whatsapp Community🚩
RELATED ARTICLES

Most Popular