HomeKarnatakaBIG NEWS: ಇದು ರೈತ ವಿರೋಧಿ ಸರ್ಕಾರ; ಅನ್ನದಾತರ ಶಾಪಕ್ಕೆ ಸರ್ಕಾರ ಗುರಿಯಾಗುತ್ತದೆ; ಆರ್.ಅಶೋಕ್ ವಾಗ್ದಾಳಿ

BIG NEWS: ಇದು ರೈತ ವಿರೋಧಿ ಸರ್ಕಾರ; ಅನ್ನದಾತರ ಶಾಪಕ್ಕೆ ಸರ್ಕಾರ ಗುರಿಯಾಗುತ್ತದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರೈತರನ್ನು ಅವಾಮಾನಿಸಿರುವ ಸಚಿವ ಶಿವಾನಂದ ಪಾಟೀಲ್ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರ ಎಂಬುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಸಾಲಮನ್ನಾ ಆಸೆಗಾಗಿ ರೈತರು ಪದೇ ಪದೇ ಬರಗಾಲ ಬರಲಿ ಎಂದು ಆಶಿಸುತ್ತಾರೆ. ಪರಿಹಾರ ಹೆಚ್ಚು ಸಿಗುತ್ತೆ ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದು, ಸಚಿವರ ಹೇಳಿಕೆ ಖಂಡನೀಯ. ರೈತರನ್ನು, ಅನ್ನದಾತನನ್ನು ಅವಮಾನ ಮಾಡುವ ಹೇಳಿಕೆ ನೀಡಿದ್ದಾರೆ. ಸಚಿವರ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಕ್ಕೆ ನಾಚಿಕೆಯಾಗಬೇಕು. ಹಿಂದೆ ರೈತರ ಬಗ್ಗೆ ಹಗುರವಾಗಿ ಹೇಳಿದಾಗಲೂ ಯಾವುದೇ ಕೆರಮ ಕೈಗೊಂಡಿಲ್ಲ. ಈಗ ಸಚಿವರು ರೈತರನ್ನು ಅವಮಾನಿಸುವ ಹೇಳಿಕೆ ಕೊಟ್ಟಿದ್ದಾರೆ. ಈಗಲೂ ಯಾವುದೇ ಕ್ರಮಕ್ಕೆ ಸರ್ಕಾರ ಮುಂದಿಗಿಲ್ಲ. ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿಯಾಗಲಿದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular