HomeKarnatakaBIG NEWS: ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

BIG NEWS: ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರು: ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕೇಂದ್ರದ ಧೋರಣೆ ಖಂಡಿಸಿ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್, ಸಾರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ.

ಒಂದು ಸುಳ್ಳನ್ನ ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ ಸಿಎಂ ಸಿದ್ದರಾಮಯ್ಯನವರೇ ಎಂದಿರುವ ಆರ್.ಅಶೋಕ್, ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು ಎಂದು ಹೇಳಿದ್ದಾರೆ.

14 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ಬಿಟ್ಟು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ಕಳೆದ 20 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಒಟ್ಟು ಅನುದಾನ, ತೆರಿಗೆ ಹಂಚಿಕೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular