HomeKarnatakaBIG NEWS: ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆಯುವ ಬ್ರ್ಯಾಂಡ್ ಅಂಬಾಸಿಡರ್; ಆರ್.ಅಶೋಕ್ ವಾಗ್ದಾಳಿ

BIG NEWS: ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆಯುವ ಬ್ರ್ಯಾಂಡ್ ಅಂಬಾಸಿಡರ್; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮುಂದುವರೆಸಿದ್ದಾರೆ. ಮತಕ್ಕಾಗಿ ರಾಜಕೀಯ ಮಾಡುವುದು ಸಿದ್ದರಾಮಯ್ಯನವರ ರಕ್ತದ ಕಣದಲ್ಲಿ ಬಂದಿದೆ. ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ಧರ್ಮ್ ಒಡೆಯುವ ಬ್ರ್ರ್ಯಾಂಡ್ ಅಂಬಾಸಿಡರ್. ವೋಟಿಗಾಗಿ ರಾಜಕಾರಣ ಮಾಡುತ್ತಿದ್ದಾರೆ. ಅಂಲ್ಪಸಂಖ್ಯಾತರನ್ನು ಓಲೈಸಲು ಕಾಣಿಕೆ ಮೇಲೆ ಕಾಣಿಕೆಗಳನ್ನು ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರೈತರ ಕೊರಳಿಗೆ ಸಿದ್ದರಾಮಯ್ಯ ಸರ್ಕಾರ ಕುಣಿಕೆ ಹಾಕಿದೆ. ಅಲ್ಪಸಂಖ್ಯಾತರನ್ನು ಓಲೈಸಲು ಕೊಡುಗೆಗಳನ್ನು ನೀಡುತ್ತಿದ್ದಾರೆ. ರಾಮನ ಹೆಸರು ಹೇಳಿದರೆ ಕಾಂಗ್ರೆಸ್ ನವರಿಗೆ ಭಯವಾಗುತ್ತದೆ. ರಾಮನ ಆರಾಧನೆ ಮಾಡುವುದಾದರೆ ರಾಮನ ಪೂಜೆ ಮಾಡಬೇಕಿತ್ತು. ಆದರೆ ಹಾಗೆ ಮಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಮುಂದೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular