ಮೈಸೂರು: ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಆರ್.ಅಶೋಕ್, ಬಾನು ಮುಷ್ತಾಕ್ ಹಸುವಿನ ಮಾಂಸ ತಿನ್ನುತ್ತಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಆರ್.ಅಶೋಕ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾನು ಮುಷ್ತಾಕ್ ಅವರು ದನ ತಿನ್ನೋದನ್ನು ನೋಡಿದ್ದು ಯಾರು? ಇದೆಲ್ಲ ಡೋಂಗಿಗಳು ಮಾತನಾಡುವುದು. ಅವರು ಡೋಂಗಿಗಳು ಹಾಗಾಗಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಡೋಂಗಿಗಳ ರಾಜಕೀಯ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ರಾಜಕೀಯಕ್ಕಾಗಿ ಆರ್. ಅಶೋಕ್ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಇದಕ್ಕೆ ನಾನು ಉತ್ತರಕೊಡಲ್ಲ ಎಂದರು.