ಬೆಂಗಳೂರು: ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಎಸ್ ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದರೋಡೆಕೋರರಿಗೆ ಹಬ್ಬದ ವಾತಾವಾರ್ಣ ಇದ್ದಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಕಾಂಗ್ರೆಸ್ ಸರ್ಕಾರ ಇರುವುದು ಇನ್ನೆರಡು ವರ್ಷ. ಅದಕ್ಕೆ ದರೋಡೆಯಾದ್ರೂ ಮಾಡಿ, ಲೂಟಿಯಾದರೂ ಮಾಡಿ ಎಂದು ಸುಮ್ಮನಿದ್ದಾರೆ. ನೀವು ಲೂಟಿ ಮಾಡಿ ನಮಗೆ ಕಮಿಷನ್ ಕೊಡಿ ಎಂದು ಹೇಳುತ್ತಾರೆ. ಸರ್ಕಾರ ಪಾಪರ್ ಆಗಿದೆ. ಪರಿಹಾರ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಜಾತಿ ಒಡೆಯುವುದರಲ್ಲಿ ಫೇಮಸ್. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಿದ್ದರಾಮಯ್ಯನವರಿಗೆ ಸನ್ಮಾನ ಮಾಡುತ್ತೇವೆ. 52 ಹೊಸ ಜಾತಿಗಳನ್ನು ಸೇರಿದ್ದಾರೆ. ಎಲ್ಲಾ ಜಾತಿಗಳಲ್ಲೂ ಕ್ರಿಶ್ಚಿಯನ್ನರನ್ನು ಹುಟ್ಟುಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.