BIG NEWS: ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕೇರಳದ ವಯನಾಡ್ ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿರುವ ವಿಚಾರ ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read