HomeKarnatakaಸಚಿವ ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿ; ಅಬಕಾರಿ ಇಲಾಖೆ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್:...

ಸಚಿವ ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿ; ಅಬಕಾರಿ ಇಲಾಖೆ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್: ಆರ್.ಅಶೋಕ್ ಆರೋಪ

ಬೆಂಗಳೂರು: ಸಚಿವ ಕೆ.ಹೆಚ್.ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಸಲು ಸರ್ಕಾರ ಮುಂದಾಗಿರುವ ಕ್ರಮ ಹಾಗೂ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಸಿದ್ದರಾಮಯ್ಯ. ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಕರ್ನಾಟಕ ಕಾಂಗ್ರೆಸ್ ನಲ್ಲಿ ವರ್ಗಾವಣೆ ದಂಧೆ ಎಷ್ಟು ಸಾಂಸ್ಥಿಕ ರೂಪ ಪಡೆದಿದೆ ಎಂದರೆ ಅಬಕಾರಿ ಇಲಖೆಯಲ್ಲಿ ಪೇದೆಯಿಂದ ಹಿಡಿದು ಉಪ ಆಯುಕ್ತರ ಹುದ್ದೆವರೆಗೂ 5 ಲಕ್ಷ ರೂಪಾಯಿಯಿಂದ 3.5 ಕೋಟಿ ರೂಪಾಯಿವರೆಗೆ ಲಂಚ ಫಿಕ್ಸ್ ಆಗಿದೆ ಎಂದು ಕಿಡಿಕಾರಿದ್ದಾರೆ.

ಅಂದಹಾಗೆ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಹುಲ್ ಗಾಂಧಿ ಅವರು ಫಿಕ್ಸ್ ಮಾಡಿರುವ ರೇಟೆಷ್ಟು ಸಿದ್ದರಾಮಯ್ಯನವರೇ? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಮುನಿಯಪ್ಪ ಅವರ ಅಳಿಯನಿಗಾಗಿ ಕರ್ನಾಟಕ ಸರ್ಕಾರ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಸಲು ಮುಂದಾಗಿದೆ ಎಂಬ ವರದಿ ಇದೆ. ಶಾಸಕರ ಬಂಡಾಯ ಶಮನ ಮಾಡಲು ಸಂವಿಧಾನ ನಿಯಮ ಉಲ್ಲಂಘಿಸಿ 90 ಕ್ಯಾಬಿನೇಟ್ ದರ್ಜೆ ಸ್ಥಾನಮಾನ ಹುದ್ದೆ ಸೃಷ್ಟಿಸಿದ್ದಾಯ್ತು. ಈಗ ಸಚಿವರ ಅಳಿಯನಿಗಾಗಿ ಹೊಸ ಹುದ್ದೆಯನ್ನೇ ಸೃಷ್ಟಿಸಿ ನೇಮಕಾತಿ ಮಾಡಿದೆ ಲಜ್ಜೆಗೆಟ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular