HomeKarnatakaBIG NEWS: ಶಾಲಾ ಮಕ್ಕಳನ್ನು ಜೆಸಿಬಿಯಲ್ಲಿ ಕಳುಹಿಸಿ ಇವರು ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದಾರೆ; ರಾಜ್ಯದ ಜನ...

BIG NEWS: ಶಾಲಾ ಮಕ್ಕಳನ್ನು ಜೆಸಿಬಿಯಲ್ಲಿ ಕಳುಹಿಸಿ ಇವರು ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದಾರೆ; ರಾಜ್ಯದ ಜನ ಬರದಿಂದ ಕಂಗೆಟ್ಟಿದ್ದರೆ ಸಿಎಂ-ಸಚಿವರಿಂದ ಮೋಜು ಮಸ್ತಿ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಹಾಗೂ ಸಚಿವರು ವಿಶೇಷ ಜೆಟ್ ವಿಮಾನದಲ್ಲಿ ಪ್ರಯಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ಜನರು, ರೈತರು ಕಂಗೆಟ್ಟಿದ್ದಾರೆ. ಬೆಳೆಗಳು ನಾಶವಾಗಿ ಅನ್ನದಾತ ಕಣ್ಣೀರಿಡುತ್ತಿದ್ದಾನೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಐಷಾರಾಮಿಯಾಗಿ ವಿಶೇಷ ಜೆಟ್ ವಿಮಾನದಲ್ಲಿ ಪ್ರಯಾಣ ಮಾಡುತ್ತಾ ಮೋಜು-ಮಸ್ತಿಯಲ್ಲಿ ತೊಡಗಿರುವುದು ಖಂಡನೀಯ ಎಂದು ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಮಕ್ಕಳನ್ನು ಜೆಸಿಬಿಯಲ್ಲಿ ಕಳುಹಿಸಿ, ಸಿಎಂ, ಸಚಿವರು ಜೆಟ್ ವಿಮಾನದಲ್ಲಿ ಹೋಗುತ್ತಿದ್ದಾರೆ. ಬರಗಾಲದಿಂದ ಜನರು ನರಳಾಡುತ್ತಿರುವಾಗ ಸಿಎಂ, ಸಚಿವರು ಮೋಜು-ಮಸ್ತಿ ಮಾಡುತ್ತಾ ತಿರುಗುತ್ತಿದ್ದಾರೆ. ಬರದ ಪರಿಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಈ ದೌಲತ್ತು ಬೇಕಿತ್ತಾ? ಎಂದು ಪ್ರಶ್ನಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular