HomeKarnatakaBIG NEWS: ದುಷ್ಮನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂಬಂತಾಗಿದೆ ಸಿಎಂ...

BIG NEWS: ದುಷ್ಮನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂಬಂತಾಗಿದೆ ಸಿಎಂ ಸಿದ್ದರಾಮಯ್ಯನವರ ಸ್ಥಿತಿ: ಆರ್.ಅಶೋಕ್ ಲೇವಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಪಕ್ಷದಲ್ಲೇ ವಿರೋಧಿಗಳಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರಿಗೆ ಬೆಂಬಲ ನೀಡುವವರಿಗಿಂತ ಖುರ್ಚಿಗಾಗಿ ಹಂಬಲಿಸುವವರೇ ಹೆಚ್ಚು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಹೊರಗೆ ಸಿಎಂ ಸಿದ್ದರಾಮಯ್ಯ ಪರ ಎಂದು ಹೇಳುತ್ತಾ, ಒಳಗೊಳಗೆ ಕುರ್ಚಿಗಾಗಿ ಲೆಕ್ಕಾಚಾರ ಹಾಕುತ್ತಿದ್ದಾರೆ. ದುಷ್ಮನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂಬಂತಾಗಿದೆ ಸಿಎಂ ಸಿದ್ದರಾಮಯ್ಯನವರ ಪರಿಸ್ಥಿತಿ.

ಸಿಎಂ ಸಿದ್ದರಾಮಯ್ಯನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತೃಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ.
ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಟಾಂಗ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular