BIG NEWS: ಸರ್ಕಾರದಿಂದ ಫಲಾನುಭವಿಗಳಿಗೆ ಸಿಗದ ಮಾಸಾಶನ; ಭದ್ರತಾ ಪಿಂಚಣಿ ನೀಡಲೂ ಇವರ ಬಳಿ ಹಣವಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಬೊಕ್ಕಸ ಬರಿದಾಗಿಲ್ಲ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ನೀಡುವ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರಿಗೆ ನೆರವು, ವೃದ್ಧಾಪ್ಯ ವೇತನ ಮಾಸಾಶನವನ್ನು ನೀಡುತ್ತಿಲ್ಲ ಎಂದು ವಿಪಕ್ಷ ನಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಐದಾರು ತಿಂಗಳಿಂದ ಫಲಾನುಭವಿಗಳಿಗೆ ಮಾಸಾಶನ ಸಿಕ್ಕಿಲ್ಲ. ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿಯೇ ಫಲಾನುಭವಿಗಳು ಪರದಾಡುವ ಸ್ಥಿತಿ ಇದೆ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ಸರ್ಕಾರಕ್ಕೆ ತೇಪೆ ಹಾಕುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಕಳೆದ 6 ತಿಂಗಳಿಂದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ, ವಿಕಲಚೇತನ ಫಲಾನುಭವಿಗಳಿಗೆ ಮಾಸಾಶನ ನೀಡಿಲ್ಲ ಯಾಕೆ? ಭ್ರಷ್ಟಾಚಾರ, ಕಮಿಷನ್ ಗಳಿಂದ ರಾಜ್ಯದ ತೆರಿಗೆ ಹಣ ಲೂಟಿ ಮಾಡಿರುವ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲು ಹಣವಿಲ್ಲದ ಶೋಚನಿಯ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read