HomeLatest NewsBIG NEWS: ಅಧಿಕಾರಿಗಳ ವರ್ಗಾವಣೆ ವಿಚಾರ: ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಪತ್ರ: ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ...

BIG NEWS: ಅಧಿಕಾರಿಗಳ ವರ್ಗಾವಣೆ ವಿಚಾರ: ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಪತ್ರ: ಸಿಎಂ-ಡಿಸಿಎಂ ಮುಸುಕಿನ ಗುದ್ದಾಟ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ವಿಚಾರವಾಗಿ, ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಪೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ ನೀಡಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಕರ್ನಾಟಕದ ಅಭಿವೃದ್ಧಿ ಸೊರಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular