HomeKarnatakaBIG NEWS: ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಸರ್ಕಾರದಿಂದಲೇ ಲ್ಯಾಂಡ್ ಜಿಹಾದ್ ಆರಂಭವಾಗಿದೆ:...

BIG NEWS: ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಸರ್ಕಾರದಿಂದಲೇ ಲ್ಯಾಂಡ್ ಜಿಹಾದ್ ಆರಂಭವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಸಚಿವ ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಡ ರೈತರ ಜಮೀನನ್ನು ಕಬಳಿಸಲು ಯತ್ನ ನಡೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಈಗ ರೈತರ ಭೂಮಿಯನ್ನೇ ವಕ್ಫ್ ವಶಕ್ಕೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ 15 ಸಾವಿರ ಎಕರೆ ಭೂಮಿಯನ್ನು ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ ರೈತರಿಗೆ ತಿಳುವಳಿಕೆ ನೋಟಿಸ್ ನೀಡಲಾಗಿದೆ. ಇದು ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಕಿಡಿಕಾರಿದರು.

ಕಳೆದ ತಿಂಗಳು ವಿಜಯಪುರಕ್ಕೆ ಭೇಟಿ ಕೊಟ್ಟಿದ್ದ ಸಚಿವ ಜಮೀರ್ ಅಹ್ಮದ್, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ನೀಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತ ಒತ್ತುವರಿ ನಡೆಯುತ್ತಿದೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಈಗಾಗಲೇ ಬಾಂಬ್ ಸ್ಫೋಟ ಪ್ರಕರಣ, ಪಾಕಿಸ್ತಾನಕ್ಕೆ ಜೈಕಾರ, ಲವ್ ಜಿಹಾದ್ ನಂತಹ ಪ್ರಕರಣಗಳು ನಡೆದಿವೆ. ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ವಕ್ಫ್ ನಿಂದ ರೈತರ ಭೂಮಿ ಕಬಳಿಕೆ ನಡೆಯುತ್ತಿದೆ. ಇದೊಂದು ಲ್ಯಾಂಡ್ ಜಿಹಾದ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular