HomeKarnatakaಆಕಾಂಕ್ಷಿ V/S ಅಭ್ಯರ್ಥಿ: ಚಾಮರಾಜ ಕ್ಷೇತ್ರಕ್ಕೆ ಆರ್.ಅಶೋಕ ಭೇಟಿ!

ಆಕಾಂಕ್ಷಿ V/S ಅಭ್ಯರ್ಥಿ: ಚಾಮರಾಜ ಕ್ಷೇತ್ರಕ್ಕೆ ಆರ್.ಅಶೋಕ ಭೇಟಿ!

2028ರ ವಿಧಾನಸಭೆ ಚುನಾವಣೆ ದೂರದಲ್ಲಿದ್ದರೂ ಮೈಸೂರು ನಗರದ ಚಾಮರಾಜ ಕ್ಷೇತ್ರ ಸುದ್ದಿಯಲ್ಲಿದೆ. ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ V/S ಅಭ್ಯರ್ಥಿ ಫೈಟ್ ಜೋರಾಗಿದೆ. ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಚಾಮರಾಜದಲ್ಲಿ ಟಿಕೆಟ್ ಬಯಸಿರುವುದು ಚರ್ಚೆಗೆ ಕಾರಣವಾಗಿದೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ ಮೈಸೂರಿಗೆ ಭೇಟಿ ನೀಡಿದ್ದರು. ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 23ರ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ಆರ್. ಅಶೋಕ್ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ, ಹಾಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಅಶೋಕ ಅವರನ್ನು ಪ್ರತಾಪ್ ಸಿಂಹ ಮೈಸೂರು ನಗರಕ್ಕೆ ಸ್ವಾಗತಿಸಿ ಚಾಮರಾಜ ಕ್ಷೇತ್ರಕ್ಕೆ ಕರೆದುಕೊಂಡು ಹೋಗಿದ್ದರು. ಅಶೋಕ ಅವರು ಮೈಸೂರು ನಗರ ಹಾಗೂ ಗ್ರಾಮಾಂತರ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳು, ಪಧಾದಿಕಾರಿಗಳು ಹಾಗೂ ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು, ಕಾರ್ಯಕರ್ತರೊಂದಿಗೆ ಲಘು ಉಪಹಾರ ಸೇವಿಸಿ, ಚರ್ಚೆಯನ್ನು ನಡೆಸಿದರು.

ಆಕಾಂಕ್ಷಿ V/S ಅಭ್ಯರ್ಥಿ: ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕೀಯಕ್ಕೆ ಬರುತ್ತೇನೆ. ಮೈಸೂರಿನ ಚಾಮರಾಜ ಕ್ಷೇತ್ರ ನನ್ನ ಆಯ್ಕೆ ಎಂದು ಹೇಳಿದ್ದಾರೆ. ಈ ಹೇಳಿಕೆ ಈಗ ಮೈಸೂರು ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ಚರ್ಚೆಯ ಬಿಸಿ ಹೆಚ್ಚಾಗಿ, ಪ್ರತಾಪ್ ಸಿಂಹ ಹೇಳಿಕೆಗೆ ವಿರೋಧ ವ್ಯಕ್ತವಾದ ಕಾರಣ ಪ್ರತಾಪ್ ಸಿಂಹ ನಾನು ಆಕಾಂಕ್ಷಿ. ಅಭ್ಯರ್ಥಿ ಯಾರಾಗಬೇಕು ಎಂದು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳುವ ಮೂಲಕ ಚರ್ಚೆಯನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.

ಚಾಮರಾಜ ಕ್ಷೇತ್ರದ ಕುರಿತು ಬಿಸಿ-ಬಿಸಿ ಚರ್ಚೆಗಳು ನಡೆಯುತ್ತಿರುವಾಗಲೇ ಆರ್.ಅಶೋಕ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಚಾಮರಾಜದಲ್ಲಿಯೇ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ಆದ್ದರಿಂದ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಚಾಮರಾಜ ಕ್ಷೇತ್ರದ ಮಾಜಿ ಶಾಸಕರು. ಸುಮಾರು 30 ವರ್ಷದಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅವರು ಕ್ಷೇತ್ರದಲ್ಲಿ ಸೋಲು-ಗೆಲುವು ಕಂಡಿದ್ದಾರೆ.

2028ರಲ್ಲಿಯೂ ಅವರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಆದರೆ ಈಗ ಪ್ರತಾಪ್ ಸಿಂಹ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷ ಅಧಿಕೃತವಾಗಿ ಯಾರು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಆದರೆ ಪ್ರತಾಪ್ ಸಿಂಹ ಕ್ಷೇತ್ರದಲ್ಲಿ ಸಕ್ರಿಯವಾಗಿ ಓಡಾಟ ಪ್ರಾರಂಭಿಸಿದ್ದು, ಟಿಕೆಟ್ ಪಡೆಯುವ ಉತ್ಸಾಹದಲ್ಲಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಹಾಲಿ ಸಂಸದರಾಗಿದ್ದರೂ ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೈತಪ್ಪಿತ್ತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟಿಕೆಟ್ ಪಡೆದು, ಗೆದ್ದು ಬಂದರು. ಆದ್ದರಿಂದ ಈಗ ಪ್ರತಾಪ್ ಸಿಂಹ ರಾಜ್ಯ ರಾಜಕೀಯದತ್ತ ಗಮನ ಹರಿಸಿದ್ದಾರೆ. ಆದರೆ ಚಾಮರಾಜ ಕ್ಷೇತ್ರದ ಟಿಕೆಟ್ ಕೇಳಿರುವುದು ಅಸಮಾಧಾನದ ಕಿಡಿ ಹೊತ್ತಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular