HomeKarnatakaಡಿಕೆಶಿ ಕಿವಿ ಮೇಲೆ ಹೂವು: ಹಳೆಯ ದಿನದ ನೆನಪು ಮಾಡಿಕೊಟ್ಟ ಅಶೋಕ!

ಡಿಕೆಶಿ ಕಿವಿ ಮೇಲೆ ಹೂವು: ಹಳೆಯ ದಿನದ ನೆನಪು ಮಾಡಿಕೊಟ್ಟ ಅಶೋಕ!

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಕರ್ನಾಟಕ ಬಜೆಟ್ 2026 ಮಂಡನೆ ಮಾಡಿದರು.  ಬಜೆಟ್ ಮಂಡನೆ ಬಳಿಕ ಪ್ರತಿಪಕ್ಷವಾದ ಬಿಜೆಪಿಯ ನಾಯಕರು ಖಾಲಿ ಚೊಂಬು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

ರಾಜ್ಯದ ಜನತೆಯನ್ನು ಸಾಲದ ಸುಳಿಯಲ್ಲಿ ಸಿಲುಕಿಸುವಂತಹ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು.

ಬಿಜೆಪಿಯ ಖಾಲಿ ಚೊಂಬು ಪ್ರದರ್ಶನದ ಪ್ರತಿಭಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದಸನದಲ್ಲಿ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ ಈಗ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ‘ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷದ ಶಾಸಕರು ಸಾಂಕೇತಿಕವಾಗಿ ಖಾಲಿ ಚೊಂಬು ತಂದು ಪ್ರತಿಭಟನೆ ಮಾಡಿದ್ದಕ್ಕೆ ನಿನ್ನೆ ಸದನದಲ್ಲಿ ಮಹಾನ್ ಸತ್ಯಹರಿಶ್ಚಂದ್ರನ ರೀತಿ ಆಕ್ಷೇಪಣೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಏನು ಮಾಡಿತ್ತು ಎಂಬುದನ್ನ ಮರೆತಂತಿದೆ’ ಎಂದು ಹೇಳಿದ್ದಾರೆ.

‘ಡಿ.ಕೆ.ಶಿವಕುಮಾರ್ ಅವರೇ, ನಾವು ಬಜೆಟ್ ಮಂಡನೆ ಆದ ನಂತರ ಚೊಂಬು ಹಿಡಿದು ಪ್ರತಿಭಟನೆ ಮಾಡಿದೆವು. ಆದರೆ, 2023ರಲ್ಲಿ ಅಂದಿನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸುವಾಗಲೇ ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಿವಿಯ ಮೇಲೆ ಹೂವಿಟ್ಟುಕೊಂಡು ಸದನದಲ್ಲಿ ಕೂತಿದ್ದನ್ನ ಕರ್ನಾಟಕದ ಜನತೆ ಮರೆತಿಲ್ಲ’ ಎಂದು ಹಿಂದಿನ ದಿನಗಳನ್ನು ನೆನಪು ಮಾಡಿಕೊಟ್ಟಿದ್ದಾರೆ.

‘ಸಭ್ಯತೆ, ಶಿಷ್ಟಾಚಾರ, ನೈತಿಕತೆ ಬಗ್ಗೆ ತಮ್ಮಿಂದ ನಾವು ಪಾಠ ಕಲಿಯಬೇಕಾಗಿಲ್ಲ ಸ್ವಾಮಿ. ನೀವು ಅಧಿಕಾರಕ್ಕೆ ಬಂದಿರುವುದೇ ಸುಳ್ಳು, ಅಪಪ್ರಚಾರ, ತೇಜೋವಧೆಯ ಆಧಾರದ ಮೇಲೆ. ಬಜೆಟ್ ಮಾತ್ರವಲ್ಲ, ತಮ್ಮ ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ. ಕರ್ನಾಟಕದ ಪ್ರಜ್ಞಾವಂತ ಮತದಾರರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಸ್ವಾಮಿ. ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಅಂತ್ಯ ಸಮೀಪಿಸುತ್ತಿದೆ. ಇದು ಗ್ಯಾರೆಂಟಿ. ಬರೆದಿಟ್ಟುಕೊಳ್ಳಿ’ ಎಂದು ಆರ್.ಅಶೋಕ ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular