BIG NEWS: ಕಾಂಗ್ರೆಸ್‌ ಹೇಳಿದ್ದೇನು?, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು? ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಿದ್ದೇವೆ: ಆರ್. ಅಶೋಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಏನನ್ನೂ ನೀಡಿಲ್ಲ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಲಿದ್ದೇವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಶಾಸಕರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್‌ ಸರ್ಕಾರ ಹಣ ಇದೆ ಎಂದು ಹೇಳುತ್ತಲೇ ಇದೆ. ಆದರೂ ಉತ್ತರ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಬೆಳೆಹಾನಿ ಪರಿಹಾರ ನೀಡಿದ್ದೆಷ್ಟು? ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ? ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ. ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರ್ಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಾಂಗ್ರೆಸ್‌ ಹೇಳಿದ್ದು ಏನು, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು ಎಂಬ ಬಗ್ಗೆ ಶಾಸಕರೇ ಮಾತನಾಡಲಿದ್ದಾರೆ ಎಂದರು.

ಸಾರಿಗೆ ನೌಕರರು ಮುಷ್ಕರ ಮಾಡುವುದಾಗಿ ಹೇಳಿದ್ದಾರೆ. ಅಬಕಾರಿ ಇಲಾಖೆ, ಗುತ್ತಿಗೆದಾರರು ಕೂಡ ಪ್ರತಿಭಟನೆ ಮಾಡಲು ಮುಂದಾಗಿದ್ದರು. ರಸ್ತೆ ಅಭಿವೃದ್ಧಿ, ಆಸ್ಪತ್ರೆ ನಿರ್ಮಾಣ, ಬೆಳೆಹಾನಿ ಪರಿಹಾರ ಯಾವುದಕ್ಕೂ ಹಣ ಇಲ್ಲ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಲ್ಲಾ ವಿಚಾರಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read