HomeLatest NewsBREAKING: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

BREAKING: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರು: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಅಬಕಾರಿ ಸಚಿವ ತಿಮಾಪುರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸ್ವತಃ ಅಬಕಾರಿ ಡಿಸಿ ಸಚಿವರು ಹಾಗೂ ಅವರ ಪುತ್ರನ ವಿರುದ್ಧ ಲಂಚದ ಆರೋಪ ಮಾಡಿದ್ದಾರೆ. ಅಬಕಾರಿ ಸಚಿವರ ವಿರುದ್ಧ ಈ ಹಿಂದಿನಿಂದಲೂ ಹಲವು ಆರೋಪಗಳು ಕೇಳಿಬಂದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಒಂದು ವೇಳೆ ಸಿಎಂ ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಪಡೆಯದಿದ್ದರೆ ಹಗರಣದಲ್ಲಿ ಸ್ವತಃ ಸಿಎಂ ಭಾಗಿಯಾಗಿದ್ದಾರೆ ಎಂದರ್ಥವಾಗುತ್ತದೆ. ಸಚಿವರ ರಾಜೀನಾಮೆ ಪಡೆದು, ಸೂಕ್ತ ತನಿಖೆಗೆ ಆದೇಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular