HomeLive News80 ಪರ್ಸೆಂಟ್ ಕಮಿಷನ್ ಆರೋಪ ಸುಳ್ಳಾದರೆ ಮಾನನಷ್ಟ ಮೊಕದ್ದಮೆ ಹೂಡಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್

80 ಪರ್ಸೆಂಟ್ ಕಮಿಷನ್ ಆರೋಪ ಸುಳ್ಳಾದರೆ ಮಾನನಷ್ಟ ಮೊಕದ್ದಮೆ ಹೂಡಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್

ಬೆಂಗಳೂರು: ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಕಸದ ಟೆಂಡರ್​ಗೆ ಕಮಿಷ್​ ಕೊಡಬೇಕೆಂಬ ಆರೋಪ ಸುಳ್ಳಾದರೆ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಕು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಆರ್ ಅಶೋಕ್, ಬಿಜೆಪಿ ಸರ್ಕಾರ ಇದ್ದಾಗ ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ? ಕಮಿಷನ್ ಆರೋಪ ಸುಳ್ಳಾದ್ರೆ ಮೊಕದ್ದಮೆ ಹೂಡಿ ಎಂದು ಹೇಳಿದರು.

ಕಮಿಷನ್ ಆರೋಪದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ದ್ವಂದ್ವ ಧೋರಣೆ ಅನುಸರಿಸುತ್ತಿದೆ. ಹಿಂದಿನ ಸರ್ಕಾರದ ಆರೋಪಗಳಿಗೆ ಸಾಕ್ಷಿ ಕೇಳದವರು ಈಗ ಏಕೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಗಂಭೀರವಾಗಿದೆ. ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದರು. ನಾವು ಸತ್ಯಹರಿಶ್ಚಂದ್ರನ ಮಕ್ಕಳು ಎಂದು ಹೇಳಿಕೊಳ್ಳುವ ಸಚಿವರು ಮೊದಲು ಈ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಟೆಂಡರ್‌ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಹೋಗುತ್ತಿವೆ. ಕೆಕೆಆರ್‌ಡಿಬಿ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಕಸದ ಟೆಂಡರ್ ಪಡೆಯಲು 7% ಕಮಿಷನ್, ಬಿಲ್ ಬಿಡುಗಡೆಗೆ 7% ಹಾಗೂ ವಿಶೇಷ ಎಲ್‌ಒಸಿ ಪಡೆಯಲು 7% ನೀಡಬೇಕಾಗಿದೆ. ಇದರಿಂದ ಒಟ್ಟಾರೆ 21% ಕಮಿಷನ್ ಸರ್ಕಾರಕ್ಕೆ ಹೋಗುತ್ತಿದೆ ಎಂದು ಆರೋಪಿಸಿದರು. ಇಂಜಿನಿಯರ್‌ಗಳಿಗೆ ಬೇರೆ ಕಮೀಷನ್ ನೀಡಬೇಕಾಗುತ್ತಿದೆ, ಕಸದ ಸಮಸ್ಯೆಗೆ ಸರ್ಕಾರದ ಮಾಫಿಯಾವೇ ಕಾರಣ ಎಂದು ಆರೋಪಿಸಿದರು.

ಇದೇ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿದ ಆರ್.ಅಶೋಕ್, ಇದು ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular