HomeLatest Newsಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರೇ ಕಳ್ಳರು: ಗೃಹ ಇಲಾಖೆ ಪ್ರಯಾಂಕ್ ಖರ್ಗೆ ವಹಿಸಿಕೊಂಡ ಬಳಿಕ ಇಲಾಖೆ ಮಾನ...

ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರೇ ಕಳ್ಳರು: ಗೃಹ ಇಲಾಖೆ ಪ್ರಯಾಂಕ್ ಖರ್ಗೆ ವಹಿಸಿಕೊಂಡ ಬಳಿಕ ಇಲಾಖೆ ಮಾನ ಮರ್ಯಾದ ರಾಷ್ಟ್ರ ಮಟ್ಟದಲ್ಲಿ ಹರಾಜು: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸರೇ ಕಳ್ಳರಾಗಿದ್ದಾರೆ ಎಂದು ಟೀಕಿಸಿದ್ದಾರೆ .

ಈ ಹಿಂದೆಯೇ ಡ್ರಗ್ಸ್ ಮಾರಾಟ, ದರೋಡೆ ಮೊದಲಾದ ಪ್ರಕರಣಗಳಲ್ಲಿ ಶಾಮೀಲಾದ ರಾಜ್ಯದ 124 ಪೊಲೀಸರು ಅಮಾನತುಗೊಂಡಿರುವುದು ಇಡೀ ಗೃಹ ಇಲಾಖೆಗೆ ನಾಚಿಕೆಗೇಡಿನ ಸಂಗತಿ. ಅಂತಹ ಇಲಾಖೆಯ ಹೊಣೆಯನ್ನು ‌ಸಚಿವ ಪ್ರಿಯಾಂಕ್ ಖರ್ಗೆ ವಹಿಸಿಕೊಂಡ ನಂತರ ಇಲಾಖೆಯ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹರಾಜಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರದಕ್ಷಿಣೆ ಕಿರುಕುಳ ಪ್ರಕರಣದ ತನಿಖೆಗೆ ರಾಜಸ್ತಾನಕ್ಕೆ ತೆರಳಿದ್ದ ಎಚ್ಎಎಲ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಲಂಚ ಪಡೆಯುವಾಗ ಅಲ್ಲಿನ ಎಸಿಬಿ‌ ಬಳಿ ಸಿಕ್ಕಿಬಿದ್ದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಆರ್ ಎಸ್ಎಸ್ ಗೆ ನಿಯಂತ್ರಣ ಹೇರಲು, ಧರ್ಮಸ್ಥಳದ ಬುರುಡೆ ಪ್ರಕರಣದ ಬಗ್ಗೆ ಚರ್ಚೆ ನಡೆಸುವ ಬದಲು, ಪೊಲೀಸ್ ಇಲಾಖೆಯಲ್ಲಿ ಶಿಸ್ತು ತರಲು ಸಭೆ ನಡೆಸಿದ್ದರೆ ರಾಜ್ಯದ ಕಾನೂನು ವ್ಯವಸ್ಥೆ ಈ ರೀತಿ ನಗೆಪಾಟಲಿಗೀಡಾಗುತ್ತಿರಲಿಲ್ಲ. 10 ರೂಪಾಯಿ ಲಂಚ‌ ಕೇಳಿದರೂ ಕರೆ ಮಾಡಿ ಎನ್ನುವ ಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಸರ್ಕಾರದಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿರುವಾಗ ಜನರು ದೂರುಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು? ಎಂದು ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular