HomeKarnatakaಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಯಾವಾಗ ರೀಲ್ಸ್ ಮಾಡ್ತೀರಾ ಸಚಿವ ಕೃಷ್ಣಬೈರೇಗೌಡ ಅವರೇ? ಆರ್.ಅಶೋಕ್ ಪ್ರಶ್ನೆ

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಯಾವಾಗ ರೀಲ್ಸ್ ಮಾಡ್ತೀರಾ ಸಚಿವ ಕೃಷ್ಣಬೈರೇಗೌಡ ಅವರೇ? ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರುಗೆ ಕಾಲೆಳೆದಿದ್ದಾರೆ. ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದು ಯಾವಾಗ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಜನತೆ ಪತ್ರಿಕೆಗೆ ಕಳುಹಿಸಿರುವ ನರಕಸದೃಶ ರಸ್ತೆಗುಂಡಿಗಳು ಫೋಟೋಗಳನ್ನು ಒಮ್ಮೆ ಕಣ್ಣು ಬಿಟ್ಟು ನೋಡಿ! ವಿನಾಯಕ ಲೇಔಟ್ ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್… ಹೀಗೆ ರಾಜಧಾನಿಯ ಪ್ರತಿ ರಸ್ತೆಯಲ್ಲೂ ಈಗ ‘ಗುಂಡಿಗಳದ್ದೇ ದರ್ಬಾರ್’!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರನ್ನು “Failed Model” ಎಂದು ಕರೆಯುವ ಮೂಲಕ ಬ್ರ್ಯಾಂಡ್ ಬೆಂಗಳೂರು ನಿರ್ಮಿಸುತ್ತೇವೆ ಎಂದು ಕೊಚ್ಚಿಕೊಳ್ಳುತ್ತಿದ್ದ ನಿಮ್ಮ ಮುಖ್ಯಮಂತ್ರಿಗಳ ಅಸಲಿ ಬಂಡವಾಳವನ್ನ ನೀವೇ ಬಯಲು ಮಾಡಿದ್ದೀರಿ.

ಬೆಂಗಳೂರಿನ ಇಂದಿನ ದುಸ್ಥಿತಿಗೆ ನೇರ ಹೊಣೆಗಾರರು ನಿಮ್ಮ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಎಂದು ಒಪ್ಪಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದೀರಾ ಕೃಷ್ಣ ಭೈರೇಗೌಡರೇ? ಅಥವಾ ಇದನ್ನು ಸರಿಪಡಿಸಲು ಸಾಧ್ಯವೇ ಇಲ್ಲ ಎಂದು ಕೈಚೆಲ್ಲಿದೀರಾ? ಎಂದು ಕೇಳಿದ್ದಾರೆ.

ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಬೆಂಗಳೂರಿನ ನಾಗರಿಕರ ತೆರಿಗೆ ಹಣ ಬೇಕು, ಆದರೆ ಅವರಿಗೆ ಸುರಕ್ಷಿತ ರಸ್ತೆ ಕೊಡುವ ಯೋಗ್ಯತೆ ಇಲ್ಲ. ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ಉಸ್ತುವಾರಿ ಸಚಿವರ ವೈಫಲ್ಯದಿಂದಾಗಿ ಜನರ ದಿನನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಇದೆ.

ಕ್ಯಾಮೆರಾ ಮುಂದೆ ಅಧಿಕಾರಿಗಳನ್ನು ಗದರಿಸಿ ರೀಲ್ಸ್ ಮಾಡುವ ನಾಟಕ ಸಾಕು ಮಾಡಿ, ಮೊದಲು ರಸ್ತೆಗಿಳಿದು ಈ ಗುಂಡಿಗಳನ್ನು ಮುಚ್ಚಿಸಿ. ಇಲ್ಲದಿದ್ದರೆ ಬೆಂಗಳೂರಿನ ಜನ ನಿಮಗೆ ತಕ್ಕ ಪಾಠ ಕಲಿಸುವ ದಿನ ಬಹಳ ದೂರವಿಲ್ಲ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular