HomeKarnatakaನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿಗೆ ಓಡಾಡುವಷ್ಟು ಅಧಿಕಾರದ ಮದ ಏರಿದೆಯೇ? ಸಚಿವ ನಾಗೇಂದ್ರ ವಿರುದ್ಧ ಆರ್.ಅಶೋಕ್...

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿಗೆ ಓಡಾಡುವಷ್ಟು ಅಧಿಕಾರದ ಮದ ಏರಿದೆಯೇ? ಸಚಿವ ನಾಗೇಂದ್ರ ವಿರುದ್ಧ ಆರ್.ಅಶೋಕ್ ಕಿಡಿ

ಬೆಂಗಳೂರು: ಸಚಿವ ನಾಗೇಂದ್ರ ಕೋರ್ಟ್ ಷರತ್ತುಗಳನ್ನು ಉಲ್ಲಂಘಿಸಿ ದೆಹಲಿಗೆ ಪ್ರಯಾಣ ಬೆಳೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ, ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿಗೆ ಓಡಾಡುವಷ್ಟು ಅಧಿಕಾರದ ಮದ ಏರಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ED ತನಿಖೆ ಎದುರಿಸುತ್ತಿರುವ ಕಳಂಕಿತ ಸಚಿವ ನಾಗೇಂದ್ರ ಅವರು, ನ್ಯಾಯಾಲಯ ವಿಧಿಸಿರುವ ಷರತ್ತುಗಳ ನಡುವೆಯೇ ಅನುಮತಿ ಪಡೆಯದೆ ದೆಹಲಿಗೆ ತೆರಳಿದ್ದಾರೆಯೇ ಎಂಬ ಗಂಭೀರ ಪ್ರಶ್ನೆ ಈಗ ಎದುರಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಜುಲೈ 15 ಮತ್ತು ಜುಲೈ 26ರಂದು ನಾಗೇಂದ್ರ ಅವರ ದೆಹಲಿ ಪ್ರವಾಸದ ಕುರಿತು ED ಸಿಸಿಟಿವಿ ದೃಶ್ಯಗಳು ಹಾಗೂ ವಿಮಾನ ನಿಲ್ದಾಣದ ದಾಖಲೆಗಳನ್ನು ಪರಿಶೀಲಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೆಡೆ ತನಿಖೆಗೆ ಕಾಲಾವಕಾಶ ಕೋರುತ್ತಾ, ಇನ್ನೊಂದೆಡೆ ನ್ಯಾಯಾಲಯದ ಅನುಮತಿಯನ್ನೇ ಪಡೆಯದೆ ಪ್ರಯಾಣ ಬೆಳೆಸುವುದು ಕಾಂಗ್ರೆಸ್ ಪಕ್ಷ ಕಾನೂನಿಗೆ, ನ್ಯಾಯಾಲಯಕ್ಕೆ ಎಷ್ಟು ಮಾತ್ರ ಗೌರವ ಕೊಡುತ್ತದೆ ಎನ್ನುವುದನ್ನ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಧಿಕಾರದಲ್ಲಿದ್ದವರಿಗೆ ಒಂದು ಕಾನೂನು, ಸಾಮಾನ್ಯ ನಾಗರಿಕರಿಗೆ ಮತ್ತೊಂದು ಕಾನೂನು ಎಂಬ ಕಾಂಗ್ರೆಸ್ ಪಕ್ಷದ ಮನಸ್ಥಿತಿ ರಾಜ್ಯದ ಜನರ ಮುಂದೆ ಮತ್ತೊಮ್ಮೆ ಬಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಲಯದ ಆದೇಶ ದೊಡ್ಡದೋ, ಇಲ್ಲ ನಿಮ್ಮ ಹೈಕಮಾಂಡ್ ಆದೇಶ ದೊಡ್ಡದೋ? ಭ್ರಷ್ಟಾಚಾರ ಮತ್ತು ಕಾನೂನು ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ರಾಜಕೀಯ ಅಭಯ ನೀಡುವುದೇ ನಿಮ್ಮ “ಪಾರದರ್ಶಕ” ಆಡಳಿತದ ಮಾದರಿಯೇ? ಎಂದು ಕೇಳಿದ್ದಾರೆ.

ಮುಖ್ಯಮಂತ್ರಿಗಳು ಈ ಗಂಭೀರ ಬೆಳವಣಿಗೆಯ ಬಗ್ಗೆ ತಕ್ಷಣ ಸ್ಪಷ್ಟನೆ ನೀಡಬೇಕು. ಮಾನ್ಯ ನ್ಯಾಯಾಲಯದ ಆದೇಶವನ್ನ ಉಲ್ಲಂಘನೆ ಮಾಡಿರುವ ಕಳಂಕಿತ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular