HomeLatest NewsBIG NEWS: ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ? ಆರ್‌.ಅಶೋಕ್ ಪ್ರಶ್ನೆ

BIG NEWS: ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ? ಆರ್‌.ಅಶೋಕ್ ಪ್ರಶ್ನೆ

ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್.ಅಶೋಕ್, ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್‌ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಎಂಬ ಪದ ಎಲ್ಲಿದೆ ಎಂದು ಕಾಂಗ್ರೆಸ್‌ ನಾಯಕರು ತೋರಿಸಲಿ. ರಾಹುಲ್‌ ಗಾಂಧಿ ಒಂದು ಕಡೆ ಜಾತಿ ಸಮೀಕ್ಷೆ ಬೇಕೆಂದು ಹೇಳುತ್ತಾರೆ. ನಂತರ ಜಾತ್ಯತೀತ ಎನ್ನುತ್ತಾರೆ. ಜವಹರಲಾಲ್‌ ನೆಹರು ಅವರು ಒಂದನೇ ತಿದ್ದುಪಡಿ ತಂದರು. ಒಟ್ಟು 17 ತಿದ್ದುಪಡಿಗಳನ್ನು ಅವರು ಮಾಡಿದ್ದಾರೆ. ನಂತರ ಬಂದ ಇಂದಿರಾಗಾಂಧಿ 26 ತಿದ್ದುಪಡಿ ಮಾಡಿದ್ದಾರೆ. ಬಾಬಾ ಸಾಹೇಬರ ಮೂಲ ಆಶಯಗಳನ್ನೇ ತಿದ್ದುಪಡಿ ಮಾಡಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್‌ 68 ತಿದ್ದುಪಡಿಗಳನ್ನು ಮಾಡಿದೆ ಎಂದರು.

ತುರ್ತು ಪರಿಸ್ಥಿತಿ ತರಬೇಕೆಂದು ಯಾವ ಸಂವಿಧಾನದಲ್ಲಿ ಎಲ್ಲಿ ಬರೆದಿದ್ದಾರೆ ಎಂದು ಕಾಂಗ್ರೆಸ್‌ ಹೇಳಬೇಕು. ಕಾಂಗ್ರೆಸ್‌ನವರು ಕುತಂತ್ರ ಮಾಡಿ ಈ ಎರಡೂ ಪದಗಳನ್ನು ಸೇರಿಸಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular