HomeLatest Newsಕೆಲಸದಲ್ಲಿ ಜೀರೋ, ವಿವಾದದಲ್ಲಿ ಹೀರೋ ಎನ್ನುವಂತಾಗಿದೆ ನಿಮ್ಮ ಪರಿಸ್ಥಿತಿ…ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಆರ್.ಅಶೋಕ್...

ಕೆಲಸದಲ್ಲಿ ಜೀರೋ, ವಿವಾದದಲ್ಲಿ ಹೀರೋ ಎನ್ನುವಂತಾಗಿದೆ ನಿಮ್ಮ ಪರಿಸ್ಥಿತಿ…ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಆರ್.ಅಶೋಕ್ ಲೇವಡಿ

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯ ವೈಖರಿ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಕಲಬುರಗಿ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ ಶಾಲೆಗಳ ದುರಸ್ತಿ ಬಗ್ಗೆ ಮುಖ್ಯಮಂತ್ರಿಗಳಿಗೆ ಯಾವಾಗ ಪತ್ರ ಬರೆಯುತ್ತೀ? ಎಂದು ಪ್ರಶ್ನಿಸಿದ್ದಾರೆ.

ತಾವು ಮತ್ತು ತಮ್ಮ ಕುಟುಂಬ ಕಲ್ಯಾಣ ಕರ್ನಾಟಕದ ಜನತೆಯ ಮತ ಪಡೆದು ದಶಕಗಳಿಂದ ಅಧಿಕಾರ ಅನುಭವಿಸುತ್ತಿದ್ದೀರಿ. ಆದರೆ ಕಲ್ಯಾಣ ಕರ್ನಾಟಕ ಮಾತ್ರ ಇನ್ನೂ ನಿಜಾಮರ ಆಡಳಿತದಲ್ಲಿಯೇ ಇದೆಯೇನೋ ಅನ್ನುವಷ್ಟು ಕೆಟ್ಟ ಪರಿಸ್ಥಿತಿಯಲ್ಲಿದೆ ಸ್ವಾಮಿ! ಕೆಲಸದಲ್ಲಿ ಜೀರೋ, ವಿವಾದದಲ್ಲಿ ಹೀರೋ ಎನ್ನುವಂತಾಗಿದೆ ನಿಮ್ಮ ಪರಿಸ್ಥಿತಿ ಎಂದು ಟೀಕಿಸಿದ್ದಾರೆ.

ಪತ್ರಿಕಾ ವರದಿಯನ್ನು ಒಮ್ಮೆ ಕಣ್ಣು ಬಿಟ್ಟು ನೋಡಿ! ನಿಮ್ಮದೇ ಉಸ್ತುವಾರಿ ಜಿಲ್ಲೆಗಳನ್ನೊಳಗೊಂಡ ಕಲ್ಯಾಣ ಕರ್ನಾಟಕದ ಶಾಲಾ ಕೊಠಡಿಗಳ ದುಸ್ಥಿತಿ ಬಿಚ್ಚಿಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

18,022 ಶಾಲಾ ಕೊಠಡಿಗಳು: ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿಗೆ ಕಾಯುತ್ತಿವೆ.
ಇದರಲ್ಲಿ ಬರೋಬ್ಬರಿ 8,006 ಕೊಠಡಿಗಳು ಸಂಪೂರ್ಣ ಜೀರ್ಣಾವಸ್ಥೆಯಲ್ಲಿದ್ದು, ಕಲಿಯಲು ಯೋಗ್ಯವೇ ಅಲ್ಲ ಎಂದು ಇಲಾಖೆಯೇ ಕೈಚೆಲ್ಲಿದೆ.
ಸಿಮೆಂಟ್ ಉದುರಿದ ತಾರಸಿ, ಬಿರುಕು ಬಿಟ್ಟ ಗೋಡೆಗಳ ನಡುವೆ ಬಡವರ ಮಕ್ಕಳು ಪ್ರಾಣ ಕೈಯಲ್ಲಿ ಹಿಡಿದು ಅಕ್ಷರ ಕಲಿಯಬೇಕಾದ ದುರ್ಗತಿ ಬಂದಿದೆ.

ಮಾಧ್ಯಮಗಳ ಮುಂದೆ ದಿನವಿಡೀ ಭಾಷಣ ಬಿಗಿಯುವ, ಅನಗತ್ಯ ವಿವಾದ ಸೃಷ್ಟಿಸುವ ನಿಮಗಾಗಲಿ, ಪೂರ್ಣಾವಧಿ ಶಿಕ್ಷಣ ಸಚಿವರೇ ಇಲ್ಲದ ನಿಮ್ಮ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕಾಗಲಿ ನಮ್ಮ ಕಲ್ಯಾಣ ಕರ್ನಾಟಕದ ಬಡ ಮಕ್ಕಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ತಾವು ತೋರುವ ಸೈದ್ಧಾಂತಿಕ ಬದ್ಧತೆ, ನಿಷ್ಠೆಯನ್ನು, ನಿಮಗೆ ಮತ ನೀಡಿ ಗೆಲ್ಲಿಸಿ, ಅಧಿಕಾರ ಕೊಟ್ಟಿರುವ ಕಲ್ಯಾಣ ಕರ್ನಾಟಕದ ಜನತೆಗೂ, ಅಲ್ಲಿನ ಶಾಲೆಗಳ ಅಭಿವೃದ್ಧಿಗೂ ಸ್ವಲ್ಪ ತೋರಿಸಿ ಸ್ವಾಮಿ.

ಕಲ್ಯಾಣ ಕರ್ನಾಟಕದ ಜನತೆಗೆ ನೀಡಬೇಕಾದ ಕನಿಷ್ಠ ಮೂಲಸೌಕರ್ಯದ ಕರ್ತವ್ಯದಲ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದೀರಿ. ಬಡ ಮಕ್ಕಳ ಜೀವದ ಜೊತೆ ಆಟವಾಡುವುದನ್ನು ನಿಲ್ಲಿಸಿ, ಮೊದಲು ಆ ಶಾಲೆಗಳನ್ನು ಸರಿಪಡಿಸಿ! ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular