HomeKarnatakaBIG NEWS: ಹಿಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು; ಈಗ ಮತ್ತೆ ಬೆಳಗಾವಿ ಬೆಂಕಿ...

BIG NEWS: ಹಿಂದಿನ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು; ಈಗ ಮತ್ತೆ ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುನಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹಾಗೂ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಬೆಳಗಾವಿ ಬೆಂಕಿ ಜ್ವಾಲೆ ಆರಂಭವಾಗಿದೆ ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹಿಂದೆ ರಾಜ್ಯದಲ್ಲಿದ್ದ ಸಮ್ಮಿಶ್ರ ಸರ್ಕಾರ ಬೆಳಗಾವಿಯಿಂದಲೇ ಬಿದ್ದು ಹೋಗಿತ್ತು. ಇದೀಗ ಬೆಳಗಾವಿ ಬೆಂಕಿ ಜ್ವಾಲೆಯಾಗಿ ದುಬೈವರೆಗೆ ಹೋಗಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಒಬ್ಬರಲ್ಲ ಮೂವರು ಮುಖ್ಯಮಂತ್ರಿಗಳಿದ್ದಾರೆ. ರಾಜ್ಯದ ಅವನತಿಗೆ ಇದೆಲ್ಲವೂ ಕಾರಣವಾಗಲಿದೆ. ಮುಂದೆ ಅವರು ಯಾವ್ಯಾವ ದಿಕ್ಕಿನಲ್ಲಿ ಹೋಗುತ್ತಾರೆ ನೋಡೋಣ ಎಂದು ವ್ಯಂಗ್ಯವಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular