HomeKarnatakaBIG NEWS: ಇದು ಇಂಡಿಯಾ ಮೈತ್ರಿಕೂಟದ ಹಿಡನ್ ಅಜೆಂಡಾ; ಉದಯನಿಧಿ ಸ್ಟಾಲಿನ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

BIG NEWS: ಇದು ಇಂಡಿಯಾ ಮೈತ್ರಿಕೂಟದ ಹಿಡನ್ ಅಜೆಂಡಾ; ಉದಯನಿಧಿ ಸ್ಟಾಲಿನ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉದಯನಿಧಿ ಸ್ಟಾಲಿನ್ ಹಿಂದೂ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ.

ಸನಾತನ ಧರ್ಮವನ್ನು ಡೆಂಘ್ಯೂ, ಮಲೇರಿಯಾ, ಕೊರೊನಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದಿದ್ದ ಉದಯನಿಧಿ ಸ್ಟಾಲಿನ್, ತಮ್ಮ ಹೇಳಿಕೆಗೆ ಬದ್ಧ ಎಂದು ಸಾಮರ್ಥಿಸಿಕೊಂಡಿದ್ದಾರೆ. ಅಲ್ಲದೇ ನಾನು ಕ್ಷಮೆ ಕೇಳಲ್ಲ, ಕಾನೂನು ಹೋರಾಟಕ್ಕೂ ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ಮಾಜಿ ಸಚಿವ ಆರ್. ಅಶೋಕ್, ಉದಯನಿಧಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ದೇಶದಲ್ಲಿ ಇರೋದು ಒಂದೇ ಭೂಮಿ, ಅದು ಹಿಂದೂಗಳ ಭೂಮಿ. ಸನಾತನ ಧರ್ಮ ನಮ್ಮ ರಕ್ತದ ಕಣ ಕಣದಲ್ಲಿಯೂ ಬಂದಿದೆ. ಅವರು ಇಂಡಿಯಾ ಮೈತ್ರಿಕೂಟದ ಹಿಡನ್ ಅಜೆಂಡಾ ಹೇಳಿದ್ದಾರೆ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇವರು ನಾವು ಹಿಂದೂ ಹಿದೂ ಅಂತಾ ಹೇಳಿ ಆಮೇಲೆ ಹಿಂದೂಗಳಿಗೆ ಬೈಯ್ಯುತ್ತಾರೆ. ಇದು ಕಾಂಗ್ರೆಸ್ ನಾಯಕರ ಚಾಳಿ. ಉದಯನಿಧಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ದೇಶದ ಜನ ಕ್ಷಮಿಸಲ್ಲ ಎಂದು ಕಿಡಿಕಾರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular