BIG NEWS: ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೂ ಎಷ್ಟು ದಿನ ಬೇಕು ಸ್ವಾಮಿ? ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಈವರೆಗೆ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ ಆರಂಭವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಇನ್ನೂ ಎಷ್ಟು ದಿನ ಬೇಕು ಸ್ವಾಮಿ? ಹೈಕಮಾಂಡ್ ಏಜೆಂಟ್ ಕೆ.ಸಿ.ವೇಣುಗೋಪಾಲ್
ಆದೇಶಕ್ಕೆ ಕಾಯ್ತಾ ಇದೀರಾ? ಅಥವಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಯಲಿ ಅಂತಾ wait ಮಾಡ್ತಾ ಇದೀರಾ? ಎಂದು ಪ್ರಶ್ನಿಸಿದ್ದಾರೆ.

ರೈತರ ಕಷ್ಟಕ್ಕೆ ಸ್ಪಂದಿಸದ ನಿಮ್ಮಂಥವರಿಗೆ ಯಾಕೆ ಸ್ವಾಮಿ ಅಧಿಕಾರ, ಕುರ್ಚಿ? ಜನ ಈ ನಾಲಾಯಕ್ ಸರ್ಕಾರವನ್ನ ಹಾದಿ ಬೀದಿಯಲ್ಲಿ ಛೀ ಥೂ ಅಂತ ಉಗಿಯುತ್ತಿದ್ದಾರೆ, ಶಾಪ ಹಾಕುತ್ತಿದ್ದಾರೆ. ಅನ್ನದಾತರು ದಿನನಿತ್ಯ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿರುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಅವರ ನೋವಿನ ಶಾಪ ತಟ್ಟದೇ ಇರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read