HomeKarnatakaBIG NEWS: ಕರ್ನಾಟಕದ ಜನತೆಯನ್ನು ಕಾಡುತ್ತಿರುವ ಈ ಪ್ರಶ್ನೆಗಳಿಗೆ ಉತ್ತರಿಸಿ: ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಆಗ್ರಹ

BIG NEWS: ಕರ್ನಾಟಕದ ಜನತೆಯನ್ನು ಕಾಡುತ್ತಿರುವ ಈ ಪ್ರಶ್ನೆಗಳಿಗೆ ಉತ್ತರಿಸಿ: ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಭಾನುವಾರ ಮಾಡಿದ್ದ ಭಾಷಣದ ಬಗ್ಗೆ ಕಿಡಿಕಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ್ದು ದೇಶದ ಪ್ರಧಾನಿಯಾಗಿಯೋ? ಇಲ್ಲವೇ ರಾಜ್ಯ ಬಿಜೆಪಿ ಅಧ್ಯಕ್ಷರೋ? ಇಲ್ಲವೇ ರಾಜ್ಯದ ವಿರೋಧ ಪಕ್ಷದ ನಾಯಕರಾಗಿಯೋ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಿ ಸಾರ್ವಜನಿಕರಲ್ಲಿ ಮೂಡಿರುವ ಗೊಂದಲವನ್ನು ಬಗೆಹರಿಸಬೇಕು. ಪ್ರಧಾನಮಂತ್ರಿಯವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ್ದರೂ ಅವರ ಮಾತಿನಲ್ಲಿ ಕೇಂದ್ರದಲ್ಲಿರುವ ಅವರದ್ದೇ ಸರ್ಕಾರದ ವೈಫಲ್ಯ ಮತ್ತು ರಾಜ್ಯದಲ್ಲಿರುವ ಅವರ ಪಕ್ಷದ ದುಸ್ಥಿತಿಯಯನ್ನು ಸರಿಪಡಿಸಲಾಗದ ಅಸಹಾಯಕತೆ ಇತ್ತು. ತನ್ನ ಎಲೆ ಮೇಲೆ ಆನೆ ಸತ್ತು ಬಿದ್ದಿದ್ದರೂ ಎದುರಿನವರ ಎಲೆ ಮೇಲೆ ಸತ್ತುಬಿದ್ದ ನೊಣವನ್ನು ಹುಡುಕಾಡುವ ಢೋಂಗಿ ಬುದ್ಧಿಯೂ ಅವರ ಭಾಷಣದಲ್ಲಿ ಇತ್ತು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು ಇದೇ ವಿಚಾರವನ್ನು ಪ್ರಸ್ತಾಪಿಸಿರುವ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದ್ದಾರೆ. ಅಲ್ಲದೇ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ ಭಾಷಣ ನಿಮ್ಮನ್ನು ಯಾಕೆ ಇಷ್ಟು ವಿಚಲಿತಗೊಳಿಸಿದೆ ಎಂಬುದನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಇಷ್ಟಕ್ಕೂ ಪ್ರಧಾನಿ ಮೋದಿ ಅವರು ನಿನ್ನೆ ಹೇಳಿದ್ದರಲ್ಲಿ ಹೊಸತೇನೂ ಇಲ್ಲ. ಅಧಿಕಾರ ಹಂಚಿಕೆಯ ನಿರಂತರ ಸರ್ಕಸ್ ಮತ್ತು ನಿಮ್ಮ ಸರ್ಕಾರದ ಒಳಜಗಳದಿಂದ ಕಂಗೆಟ್ಟಿರುವ 7 ಕೋಟಿ ಕನ್ನಡಿಗರ ಅಂತರಾಳದ ಧ್ವನಿಯನ್ನೇ ಪ್ರಧಾನಿಗಳು ಪ್ರತಿಧ್ವನಿಸಿದ್ದಾರೆ. ಆ ಸತ್ಯವೇ ಇಂದು ನಿಮಗೆ ನುಂಗಲಾರದ ತುತ್ತಾಗಿದೆ ಎಂದು ಕಾಲೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲಾಗಿ, ನಿನ್ನೆ ಎಚ್.ಎ.ಎಲ್ ವಿಮಾನ ನಿಲ್ದಾಣದ ಬಳಿ ನಡೆದದ್ದು ಸರ್ಕಾರಿ ಕಾರ್ಯಕ್ರಮವಲ್ಲ. ಅದು ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷದ ಐತಿಹಾಸಿಕ ವಿಜಯದ ಹಿನ್ನೆಲೆಯಲ್ಲಿ ನಮ್ಮ ಲಕ್ಷಾಂತರ ಕಾರ್ಯಕರ್ತರು ಅಭಿಮಾನಪೂರ್ವಕವಾಗಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ಕಾರ್ಯಕ್ರಮ. ಒಂದು ರಾಜಕೀಯ ವೇದಿಕೆಯಲ್ಲಿ ರಾಜಕೀಯ ಭಾಷಣ ಮಾಡುವ ಮತ್ತು ವಿರೋಧ ಪಕ್ಷಗಳ ವೈಫಲ್ಯಗಳ ಬಗ್ಗೆ ಟೀಕೆ ಮಾಡುವ ಸಂಪೂರ್ಣ ಪ್ರಜಾಸತ್ತಾತ್ಮಕ ಹಕ್ಕು ಪ್ರಧಾನ ಮಂತ್ರಿಗಳಿಗಿದೆ.

ಇಷ್ಟಕ್ಕೂ ಶಿಷ್ಟಾಚಾರ, ಘನತೆ ಮತ್ತು ಗೌರವದ ಬಗ್ಗೆ ನೀವು ಇತರರಿಗೆ ಉಪದೇಶ ನೀಡುವುದು ನೋಡಿದರೆ ಎಂತಹವರಿಗೂ ಅಚ್ಚರಿಯಾಗುತ್ತದೆ, ನಗು ಬರುತ್ತದೆ. ಬಜೆಟ್ ಭಾಷಣವನ್ನೂ ರಾಜಕೀಯಕ್ಕೆ ಬಳಸುವ, ರಾಜ್ಯಪಾಲರ ಭಾಷಣವನ್ನು ಕಾಂಗ್ರೆಸ್ ಪಕ್ಷದ ಚುನಾವಣಾ pamphlet ನಂತೆ ದುರ್ಬಳಕೆ ಮಾಡುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿ ಮಾಡುವ ಸಿದ್ದರಾಮಯ್ಯನವರೇ ಇಂದು ಸಂಸದೀಯ ಮೌಲ್ಯಗಳ ಬಗ್ಗೆ, ಶಿಷ್ಟರಚಾರದ ಬಗ್ಗೆ ಮಾತನಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ

ಪ್ರಧಾನಿ ಮೋದಿಯವರ ಮಾತಿಗೆ ಆಕ್ರೋಶ ವ್ಯಕ್ತಪಡಿಸುವ ಬದಲು, ಕರ್ನಾಟಕದ ಜನತೆಯನ್ನು ಕಾಡುತ್ತಿರುವ ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ.

  • ಸಿಎಂ ಕುರ್ಚಿಯ ಚೌಕಾಸಿಯಿಂದಾಗಿ ನಿಮ್ಮ ಸರ್ಕಾರ ಸ್ತಬ್ಧವಾಗಿ ನಿಷ್ಕ್ರಿಯವಾಗಿರುವುದು ಸುಳ್ಳೇ?
  • ಅಧಿಕಾರಕ್ಕಾಗಿ ನಿಮ್ಮ ಪಕ್ಷದ ನಾಯಕರು ನಿರಂತರವಾಗಿ ಹಾದಿ ಬೀದಿಯಲ್ಲಿ ಕಿತ್ತಾಡುತ್ತಿರುವುದು, ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವುದು ಸುಳ್ಳೇ?
  • ಬಣ ರಾಜಕೀಯದ ಮಧ್ಯೆ ಆಡಳಿತ, ಅಭಿವೃದ್ಧಿ ಹಳ್ಳ ಹಿಡಿದಿರುವುದು ಸುಳ್ಳೇ?

ಪ್ರಧಾನಿ ಮೋದಿ ಅವರು ಎಲ್ಲರಿಗೂ ಗೊತ್ತಿರುವ ನಗ್ನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಏಳೂವರೆ ಕೋಟಿ ಕನ್ನಡಿಗರ ಆಕ್ರೋಶಕ್ಕೆ ದನಿಗೂಡಿಸಿದ್ದಾರೆ. ಆ ಸತ್ಯದ ಬಿಸಿ ನಿಮಗಿಂದು ತಟ್ಟುತ್ತಿದೆ. ಸತ್ಯ ಎಂದಿನಂತೆ ನಿಮ್ಮನ್ನ ಸಹಜವಾಗಿ ವಿಚಲಿತಗೊಳಿಸಿದೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular