ಬೆಂಗಳೂರು: ಲಂಚಾವತಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಲಕ್ಷ್ಮೀನಾರಾಯಣ ಎಂಬುವವರು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಮಗನ ವಿರುದ್ಧ ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದಾರೆ. ಸಚಿವರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಅವರ ಆಡಿಯೋ ಗಳನ್ನು ಆದರಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಅಬಕಾರಿ ಡಿಸಿ ಜಗದೀಶ್ ಅಬಕಾರಿ ಸಚಿವರಿಗೆ ಹಣ ಹೋಗುತ್ತದೆ ಎಂದು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಸಿಎಲ್ 7 ಲೈಸನ್ಸ್ ಗೆ ಸಚಿವರು ಹಾಗೂ ಸಚಿವರ ಪುತ್ರ ಲಂಚಕ್ಕೆ ಬೇಡಿಕೆ ಇಡುತ್ತಿರುವುದಾಗಿ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆಯಲ್ಲಿ ಕೂಲಂಕುಷ ತನಿಖೆ ನಡೆಸುವಂತೆ ಲಕ್ಷ್ಮೀನಾರಾಯಣ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

