HomeLatest NewsBREAKING: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪುತ್ರನ ವಿರುದ್ಧ ಅಕ್ರಮ ಆರೋಪ: ದೂರು ನೀಡಿದ ಜೆಡಿಎಸ್ ಶಾಸಕ

BREAKING: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪುತ್ರನ ವಿರುದ್ಧ ಅಕ್ರಮ ಆರೋಪ: ದೂರು ನೀಡಿದ ಜೆಡಿಎಸ್ ಶಾಸಕ

ಮಂಡ್ಯ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ದೂರು ನೀಡಿದ್ದಾರೆ.

ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ಆರ್.ಬಿ.ತಿಮ್ಮಪುರ ಹಾಗೂ ಪುತ್ರನ ವಿರುದ್ಧ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ಟಿ.ಮಂಜು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಿಎಲ್-7 ಸನ್ನದು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದಿದ್ದಾರೆ.

ಸಚಿವ ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಶಾಸಕ ಮಂಜು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಸಿಎಸ್ ಪರಿಶೀಲನೆಗೆ ಸೂಚಿಸಿದ್ದಾರೆ. ಅಬಕಾರಿ ಇಲಾಖೆ ಆಯುಕ್ತರಿಗೆ ಪತ್ರ ಬರೆದಿರುವ ಸಿಎಸ್ ಶಾಲಿನಿ ರಜನೀಶ್, ದೂರಿನ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ಅಲ್ಲದೇ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular