BIG NEWS: ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡ ಅಬಕಾರಿ ಸಚಿವ

ಚಿತ್ರದುರ್ಗ: ತಮ್ಮ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಸ್ವತಃ ಅಬಕಾರಿ ಸಚಿವರೇ ಒಪ್ಪಿಕೊಂಡಿದ್ದು, ಬಹಳ ದಿನಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ ಎಂದಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಅಬಕಾರಿ ಇಲಾಖೆಯಲ್ಲಿ ಬಹಳ ದಿನಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಎರಡು ವರ್ಷಗಳಿಗೊಮ್ಮೆ ಬಾರ್ ರಿನಿವಲ್ ಮಾಡಲು ತೀರ್ಮಾನಿಸಲಾಗಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಬಿಜೆಪಿ ನಾಯಕರ ಆರೋಪಗಳ ಬಗ್ಗೆ ಮಾತನಾಡಿದ ಸಚಿವರು, ಅವರಿಗೆ ಮಾಡಲು ಕೆಲಸವಿಲ್ಲ. ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ ಹಣ ಕಾಂಗ್ರೆಸ್ ನವರದ್ದು ಎಂದು ಆರೋಪಿಸುತ್ತಿರುವ ಬಿಜೆಪಿಯವರದ್ದೇ ಯಾಕೆ ಆ ಹಣ ಆಗಿರಬಾರದು? ಪತ್ತೆಯಾಗಿರುವ ಹಣ ಬಿಜೆಪಿಯವರದ್ದು ಎಂಬ ಮಾಹಿತಿ ನಮಗೂ ಇದೆ ಎಂದು ಟಾಂಗ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read