HomeLatest Newsವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಅಬಕಾರಿ ಲಂಚಾವತಾರ ಕೇಸ್: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರ ಆಗ್ರಹ: ಆಡಳಿತ-ವಿಪಕ್ಷಗಳ...

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಅಬಕಾರಿ ಲಂಚಾವತಾರ ಕೇಸ್: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರ ಆಗ್ರಹ: ಆಡಳಿತ-ವಿಪಕ್ಷಗಳ ನಡುವೆ ಜಟಾಪಟಿ

ಬೆಂಗಳೂರು: ಅಬಕಾರಿ ಸಚಿವರಿಂದ ಲಂಚಕ್ಕೆ ಬೇಡಿಕೆ ಆರೋಪ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡುವಂತೆ ಬಿಜೆಪಿ ಸದಸ್ಯರು ಪಟ್ಟು ಹಿಡಿದ ಘಟನೆ ನಡೆಯಿತು.

ಅಬಕಾರಿ ಇಲಾಖೆ ಲಂಚಾವತಾರ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು. ಮೊದಲು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಅಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ತನಿಖೆಗೆ ಸೂಚಿಸಲಾಗಿದೆ. ಆರೋಪ ಸಾಬೀತಾದರೆ ಮುಂದಿನ ಕ್ರಮ ಎಂದು ಸಮಜಾಯಿಷಿ ನೀಡುತ್ತಿದ್ದಂತೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರ ವಿರುದ್ಧ ಆರೋಪ ಕೇಳಿಬಂದಿದ್ದಕ್ಕೆ ಕಾಂಗ್ರೆಸ್ ನವರು ರಾಜೀನಾಮೆಯನ್ನೇ ಕೊಡಿಸಿದ್ದರು. ನಮಗೊಂದು ನ್ಯಾಯ ನಿಮಗೊಂದು ನ್ಯಾಯವೇ? ಇದೇನು ಸ್ಪೆಷಲ್ ಕೇಸಾ? ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಈಗ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಡಿಸಿಯೇ ಆರೋಪ ಮಾಡಿದ್ದಾರೆ. ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಾಕಷ್ಟು ಆರೋಪಗಳು ಇವೆ. ಮೊದಲು ಅಬಕಾರಿ ಸಚಿವ ತಿಮ್ಮಾಪುರ ರಾಜಿನಾಮೆ ಕೊಡಬೇಕು. ನಂತರ ತನಿಖೆಯಾಗಲಿ ಎಂದು ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಅಶೋಕ್ ಮಾತಿಗೆ ಬಿಜೆಪಿ ಸದಸ್ಯರು ಧ್ವನಿಗೂಡಿಸಿದ್ದು, ಸಚಿವ ಆರ್.ಅಬಿ.ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದರು. ಸದನದಲ್ಲಿ ಗದ್ದಲ-ಕೋಲಾಹಲ ಆರಂಭವಾದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದ ಪ್ರಸಂಗವೂ ನಡೆಯಿತು.

For Latest News Updates, Join Our Whatsapp Community🚩
RELATED ARTICLES

Most Popular