BIG BREAKING: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿಧಿವಶ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಚಾಮರಾಜನಗರ ಕ್ಷೇತ್ರದ ಮಾಜಿ ಸಂಸದರಾಗಿದ್ದ ಅವರು ಹಿಂದೆ ಸಂತೆಮರಹಳ್ಳಿ ಕ್ಷೇತ್ರದಿಂದ ಶಾಸಕರಾಗಿದ್ದರು. ಕೇವಲ ಒಂದೇ ಒಂದು ಮತದಿಂದ ಜಯಗಳಿಸಿದ್ದರು. ಎರಡು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಅವರು ಆಯ್ಕೆಯಾಗಿದ್ದರು.

1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಪಕ್ಷದ ಮುಖಂಡನಾಗಿ ಬೆಳೆದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು.

ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರಾಗಿದ್ದು, ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು. ನಂಜನಗೂಡು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read