ಭಾರತೀಯ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಖ್ಯಾತ ನಟ ಮಾಧವನ್

ನವದೆಹಲಿ: ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಮಂಡಳಿ ಎಫ್‌ಟಿಐಐ ಅಧ್ಯಕ್ಷರಾಗಿ ಖ್ಯಾತ ನಟ, ನಿರ್ಮಾಪಕ, ನಿರ್ದೇಶಕ ಆರ್. ಮಾಧವನ್ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಾರಾಷ್ಟ್ರದ ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಮಂಡಳಿ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿದ್ದು, ಸಿನಿಮಾ ತರಬೇತಿ ಕೋರ್ಸ್ ಮತ್ತು ಸಂಬಂಧಿಸಿದ ಕಾರ್ಯ ಚಟುವಟಿಕೆ ನಡೆಸಲಿದೆ.

ಕೇಂದ್ರ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಈ ಕುರಿತಾಗಿ ಟ್ವೀಟ್ ಮಾಡಿದ್ದು, ನಿಮ್ಮ ಅನುಭವ ಮತ್ತು ಮೌಲ್ಯಗಳು ಮಂಡಳಿಯನ್ನು ಉನ್ನತೀಕರಿಸುತ್ತವೆ ಎಂದು ನನಗೆ ಗೊತ್ತಿದೆ. ಸಕಾರಾತ್ಮಕತೆ ಮತ್ತು ಬದಲಾವಣೆಯನ್ನು ತನ್ನಿ. ಅವಕಾಶವನ್ನು ಎತ್ತರಕ್ಕೆ ಕೊಂಡೊಯ್ಯಿರಿ. ನಿಮಗೆ ಅಭಿನಂದನೆಗಳು ಎಂದು ನೂತನ ಅಧ್ಯಕ್ಷ ಮಾಧವನ್ ಅವರಿಗೆ ಶುಭ ಹಾರೈಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read