HomeKarnatakaBIG NEWS: ಸಿಎಂ ಬದಲಾವಣೆ ವಿಚಾರ; ಅಸಂಬದ್ಧ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ; ಶಾಸಕ ಆರ್.ವಿ. ದೇಶಪಾಂಡೆ

BIG NEWS: ಸಿಎಂ ಬದಲಾವಣೆ ವಿಚಾರ; ಅಸಂಬದ್ಧ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ; ಶಾಸಕ ಆರ್.ವಿ. ದೇಶಪಾಂಡೆ

ಕಾರವಾರ: ಸಿಎಂ ಬದಲಾವಣೆ ವಿಚಾರ ಸರ್ಕಾರದ ವಲಯದಲ್ಲಿಯೇ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನ ಹಿರಿಯ ಮುಖಂಡರು ಇಂತಹ ಅನಗತ್ಯ ಚರ್ಚೆಗೆ ಅವಕಾಶವಿಲ್ಲ ಎಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕೆಲ ನಾಯಕರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ಅಸಂಬದ್ಧ ಹೇಳಿಕೆ ಕೊಡುವುದನ್ನು ನಿಲ್ಲಿಸಲಿ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಖುರ್ಚಿ ಭದ್ರವಾಗಿದೆ. ಅಲ್ಲಿ, ಇಲ್ಲಿ ಅಸಂಬದ್ಧ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ. ಸರ್ಕಾರ ಬಂದು ಇನ್ನೂ ಆರು ತಿಂಗಳಾಗಿಲ್ಲ. ಈಗಲೇ ಅನವಶ್ಯಕವಾದ ಚಿಂತನೆಗಳು ಯಾಕೆ? ರಾಜ್ಯದ ಏಳಿಗೆ, ಅಭಿವೃದ್ಧಿ ಕಡೆ ಗಮನಹರಿಸುವಂತೆ ಕಿವಿಮಾತು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular