HomeLatest Newsಎಸ್.ಎಂ. ಕೃಷ್ಣರಿಗಾಗಿ ಕ್ಷೇತ್ರ ತ್ಯಜಿಸಿದ್ದ ಆರ್. ವಿ. ದೇವರಾಜ್

ಎಸ್.ಎಂ. ಕೃಷ್ಣರಿಗಾಗಿ ಕ್ಷೇತ್ರ ತ್ಯಜಿಸಿದ್ದ ಆರ್. ವಿ. ದೇವರಾಜ್

ಬೆಂಗಳೂರು: ಸೋಮವಾರ ರಾತ್ರಿ ಮೈಸೂರಿನಲ್ಲಿ ನಿಧನರಾದ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಆರ್.ವಿ. ದೇವರಾಜ್(67) ಬೆಂಗಳೂರಿನ ಚಾಮರಾಜಪೇಟೆ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಮೂರು ಬಾರಿ ಶಾಸಕರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ಕೆಎಸ್ಆರ್ಟಿಸಿ ಅಧ್ಯಕ್ಷರಾಗಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

2004ರಲ್ಲಿ ಚಾಮರಾಜಪೇಟೆ ಕ್ಷೇತ್ರವನ್ನು ಎಸ್ಎಂ ಕೃಷ್ಣ ಅವರಿಗೆ ಬಿಟ್ಟು ಕೊಟ್ಟಿದ್ದರು. ಯುವ ಕಾಂಗ್ರೆಸ್ ಸದಸ್ಯರಾಗಿ, ಬೆಂಗಳೂರು ನಗರ ಸೇವಾದಳ ಅಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ದೇವರಾಜ್ ಕಾರ್ಯನಿರ್ವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1989ರಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು, 1999 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಎಸ್ಎಂ ಕೃಷ್ಣ ಅವರಿಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದರು. 2013ರಲ್ಲಿ ಚಿಕ್ಕಪೇಟೆ ಕ್ಷೇತ್ರದಲ್ಲಿ ಜಯಗಳಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular